ರಾಯಚೂರು:ಕೆರೆಗೆ ನೀರು ತರಲು ತೆರಳಿದ್ದ ಒಂದೇ ಮನೆಯ ಮೂವರು ಬಾಲಕರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸಿಂಧನೂರು ತಾಲೂಕಿನ ರೌಡಕುಂದ ಗ್ರಾಮದಲ್ಲಿ ಸಂಭವಿಸಿದೆ.
ಕೆರೆಗೆ ನೀರು ತರಲು ಹೋಗಿ ಒಂದೇ ಕುಟುಂಬದ ಮೂವರು ಬಾಲಕರು ನೀರುಪಾಲು
ಕೆರೆಗೆ ನೀರು ತರಲು ಹೋಗಿದ್ದ ಒಂದೇ ಮನೆ ಮೂವರು ಮಕ್ಕಳು ನೀರು ಪಾಲಾಗಿರುವ ದಾರುಣ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕು ವ್ಯಾಪ್ತಿಯಲ್ಲಿ ನಡೆದಿದೆ.
ಮೂವರು ಬಾಲಕರು ನೀರು ಪಾಲು
ರವಿಕುಮಾರ್(12), ನಾಗರಾಜ(9), ಕಾರ್ತಿಕ(6) ಮೃತಪಟ್ಟ ಬಾಲಕರೆಂದು ಎಂದು ಗುರುತಿಸಲಾಗಿದೆ. ಈ ಮೂವರು ಬಾಲಕರು ಒಂದೇ ಕುಟುಂಬದವರು ಎಂದು ತಿಳಿದು ಬಂದಿದ್ದು, ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಈ ಮಕ್ಕಳ ಸಾವಿನಿಂದ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಸಿಂಧನೂರು ಗ್ರಾಮೀಣ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.