ರಾಯಚೂರು:ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಎಸ್ಪಿ ಡಾ. ಸಿ ಬಿ ವೇದಮೂರ್ತಿ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಅನುಮಾನಾಸ್ಪದ ವಸ್ತು ಪತ್ತೆ.. ರಾಯಚೂರಿನಲ್ಲೂ ಬಿಗಿ ಬಂದೋಬಸ್ತ್! - Tight Bandobust in Raichur
ಕೇಂದ್ರೀಯ ಬಸ್ ನಿಲ್ದಾಣ, ರೈಲ್ವೆ ಸ್ಟೇಷನ್ ಬಳಿ ಬಾಂಬ್ ಪತ್ತೆ ತಂಡ ಹಾಗೂ ಶ್ವಾನದಳದ ತಂಡದಿಂದ ತೆರಳಿ ತಪಾಸಣೆ ನಡೆಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ರಾಯಚೂರು ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದರು.

ಎಸ್ಪಿ ಡಾ.ಸಿ.ಬಿ.ವೇದಮೂರ್ತಿ
ಜಿಲ್ಲೆಯ ಶಕ್ತಿನಗರದಲ್ಲಿನ ಆರ್ಟಿಪಿಎಸ್,ವೈಟಿಪಿಎಸ್,ಬಸವಸಾಗರ(ನಾರಾಯಣಪುರ) ಜಲಾಶಯಕ್ಕೆ ಹೆಚ್ಚಿನ ಭದ್ರತೆ ಒದಗಿಸಲು ತಿಳಿಸಲಾಗಿದೆ. ನಗರದ ಬಸ್,ರೈಲು ನಿಲ್ದಾಣಗಳಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗುವುದು ಎಂದರು.
ಎಸ್ಪಿ ಡಾ. ಸಿ ಬಿ ವೇದಮೂರ್ತಿ..
ಕೇಂದ್ರೀಯ ಬಸ್ ನಿಲ್ದಾಣ, ರೈಲ್ವೆ ಸ್ಟೇಷನ್ ಬಳಿ ಬಾಂಬ್ ಪತ್ತೆ ತಂಡ ಹಾಗೂ ಶ್ವಾನದಳದ ತಂಡದಿಂದ ತೆರಳಿ ತಪಾಸಣೆ ನಡೆಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ರಾಯಚೂರು ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದರು.