ರಾಯಚೂರು: ಹೊಸ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಯಾವುದೇ ಅಹಿಕರ ಘಟನೆ ನಡೆಯದಂತೆ ಮುನ್ನಚರಿಕೆ ವಹಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ತಿಳಿಸಿದ್ದಾರೆ.
ಹೊಸ ವರ್ಷದ ಸಂಭ್ರಮಾಚರಣೆ ಹಿನ್ನೆಲೆ ಬಿಗಿ ಪೊಲೀಸ್ ಬಂದೋಬಸ್ತ್ - ಹೊಸ ವರ್ಷದ ಸಂಭ್ರಮಾಚಾರಣೆ
ಹೊಸ ವರ್ಷದ ಆಚರಣೆ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ವರ್ತಿಸಬೇಕು, ಇಲ್ಲವಾದಲ್ಲಿ ಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ಹೇಳಿದ್ದಾರೆ.
![ಹೊಸ ವರ್ಷದ ಸಂಭ್ರಮಾಚರಣೆ ಹಿನ್ನೆಲೆ ಬಿಗಿ ಪೊಲೀಸ್ ಬಂದೋಬಸ್ತ್ SP](https://etvbharatimages.akamaized.net/etvbharat/prod-images/768-512-5546610-thumbnail-3x2-vicky.jpg)
ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ
ಹೊಸ ವರ್ಷದ ಆಚರಣೆಯ ವೇಳೆಯಲ್ಲಿ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರನ್ನು ಪತ್ತೆ ಹಚ್ಚಲು ಚೆಕ್ ಪೋಸ್ಟ್ಗಳನ್ನು ನಿರ್ಮಿಸಲಾಗಿದ್ದು, ಅಂತಹವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ನಗರದ ಪ್ರಮುಖ ರಸ್ತೆಗಳಾದ ಸ್ಟೇಷನ್ ವೃತ್ತ, ಅಂಬೇಡ್ಕರ್ ಸರ್ಕಲ್, IDMC ಲೇ ಔಟ್ ಸೇರಿದಂತೆ ಹಲವು ಕಡೆ ವಾಹನದ ಸೈಲನ್ಸರ್ ತೆಗೆದು ಕರ್ಕಶವಾಗಿ ಶಬ್ದ ಮಾಡಬಾರದು ಎಂದು ತಿಳಿಸಿದ್ದಾರೆ.
ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ
ಮದ್ಯಪಾನ ಮಾಡಿ ಅಥವಾ ಹೊಸವರ್ಷದ ಆಚರಣೆ ಸಂಭ್ರಮದ ಭರಾಟೆಯಲ್ಲಿ ಮಹಿಳೆಯರು ಹಾಗೂ ಮಕ್ಕಳಿಗೆ ತೊಂದರೆ ನೀಡಿದವರ ಮೇಲೆ ಕ್ರಮ ಕೈಗೊಳ್ಳಲು ಓಬವ್ವನ ಪಡೆ ನಿರಂತರವಾಗಿ ಗಸ್ತು ತಿರುಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.