ಯಾದಗಿರಿ: ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಸವರಲ್ಲಿ 142 ಸಂಪೂರ್ಣ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಆದ್ರೆ ಸೋಂಕಿನಿಂದ ಒಬ್ಬರು ಬಲಿಯಾಗಿದ್ದಾರೆ.
ಜಿಲ್ಲೆಯಲ್ಲಿಂದು ಹೊಸದಾಗಿ 53 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 9585 ಕ್ಕೆ ಏರಿಕೆಯಾಗಿದೆ. ಕೋವಿಡ್ ಸೋಂಕಿನಿಂದ ಇಲ್ಲಿಯವರೆಗೆ ಜಿಲ್ಲೆಯಲ್ಲಿ 8681 ಮಂದಿ ಗುಣಮುಖರಾಗಿದ್ದಾರೆ. ಕೊರೊನಾ ಸೋಂಕಿಗೆ ಇದುವರೆಗೆ ಜಿಲ್ಲೆಯಲ್ಲಿ ಒಟ್ಟು 60 ಜನ ಅಸುನೀಗಿದ್ದಾರೆ.
ಒಟ್ಟು ಕೋವಿಡ್ ಸಕ್ರಿಯ ಪ್ರಕರಣಗಳಲ್ಲಿ 844 ಮಂದಿ ಸೋಂಕಿತರು ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೊಪ್ಪಳದಲ್ಲಿ 54 ಕೊರೊನಾ ಪಾಸಿಟಿವ್ ಪ್ರಕರಣ
ಕೊಪ್ಪಳ ಜಿಲ್ಲೆಯಲ್ಲಿ ಇಂದು 54 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 12594 ಕ್ಕೆ ಏರಿಕೆಯಾಗಿದೆ. ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಗಂಗಾವತಿ ತಾಲೂಕಿನಲ್ಲಿ 16, ಕೊಪ್ಪಳ ತಾಲೂಕಿನಲ್ಲಿ 19, ಕುಷ್ಟಗಿ ತಾಲೂಕಿನಲ್ಲಿ 11 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 08 ಪ್ರಕರಣ ಸೇರಿ ಇಂದು ಒಟ್ಟು 54 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ಇಂದು ಇಬ್ಬರು ಸೋಂಕಿತರು ಸಾವನ್ನಪ್ಪಿದ್ದು ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಒಟ್ಟು 268 ಜನ ಸೋಂಕಿತರು ಮೃತಪಟ್ಟಿದ್ದಾರೆ. ಇಂದು 157 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ರಾಯಚೂರಿನಲ್ಲಿಂದು 34 ಕೊರೊನಾ
ರಾಯಚೂರು ಜಿಲ್ಲೆಯಲ್ಲಿ ಇಂದು 34 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯ ಸೋಂಕಿತರ ಸಂಖ್ಯೆ 12636ಕ್ಕೆ ತಲುಪಿದೆ.
ರಾಯಚೂರು ತಾಲೂಕಿನಲ್ಲಿ 9, ಮಾನವಿ 2, ಲಿಂಗಸೂಗೂರು 5, ಸಿಂಧನೂರು 13, ದೇವದುರ್ಗ 5 ಪ್ರಕರಣಗಳು ಇಂದು ಪತ್ತೆಯಾಗಿವೆ. ಈವರಗೆ ಪತ್ತೆಯಾಗಿರುವ ಸೋಂಕಿತರಲ್ಲಿ 11627 ಜನ ಗುಣಮುಖವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ, 867 ಪ್ರಕರಣಗಳು ಸಕ್ರಿಯವಾಗಿವೆ. ಸೋಂಕಿನಿಂದ ಇದುವರೆಗೆ 142 ಜನ ಮೃತಪಟ್ಟಿದ್ದರೆ.