ರಾಯಚೂರು: ಭತ್ತ ನಾಟಿ ಮಾಡಲು ಕಾರ್ಮಿಕರು ತೆರಳುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ 15 ಜನ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಮಾನ್ವಿ ತಾಲೂಕಿನ ರಬ್ಬಣಕಲ್ ಗ್ರಾಮದ ಬಳಿ ಘಟನೆ ಸಂಭವಿಸಿದೆ. ಭತ್ತವನ್ನು ನಾಟಿ ಮಾಡಲು ಟ್ರ್ಯಾಕ್ಟರ್ನಲ್ಲಿ ಕಾರ್ಮಿಕರು ತೆರಳುತ್ತಿದ್ದರು. ಟ್ರ್ಯಾಕ್ಟರ್ ಚಾಲಕನ ನಿರ್ಲಕ್ಷ್ಯದಿಂದ ಮಾರ್ಗ ಮಧ್ಯೆ ಟ್ರ್ಯಾಕ್ಟರ್ ಪಲ್ಟಿಯಾಗಿದೆ ಎನ್ನಲಾಗ್ತಿದೆ. ಪರಿಣಾಮ ಟ್ರ್ಯಾಕ್ಟರ್ನಲ್ಲಿದ್ದ 15 ಮಂದಿ ಕಾರ್ಮಿಕರು ಗಾಯಗೊಂಡಿದ್ದರೆ. ಗಾಯಗೊಂಡವರಲ್ಲಿ 8 ಮಂದಿ ಕಾರ್ಮಿಕರನ್ನು ಮಾನ್ವಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ರವಾನಿಸಲಾಗಿದ್ದು, ಗಂಭೀರ ಗಾಯಗೊಂಡ 7 ಮಂದಿಯನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.