ರಾಯಚೂರು: ನರೇಗಾ ಯೋಜನೆಯ ಕೂಲಿ ಕಾರ್ಮಿಕರನ್ನು ಹೊತ್ತು ತೆರಳುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಹಲವು ಕೂಲಿಕಾರ್ಮಿಕರು ಗಾಯಗೊಂಡಿರುವ ಘಟನೆ ಜಿಲ್ಲೆಯ ಮಸ್ಕಿ ತಾಲೂಕಿನ ಗದ್ರಟಗಿ ಗ್ರಾಮದ ಬಳಿ ನಡೆದಿದೆ.
ಉದ್ಯೋಗ ಖಾತರಿ ಯೋಜನೆಯಡಿ ಗುಡಿಹಾಳ ಗ್ರಾಮದ ಕರೆಯ ಕಾಮಗಾರಿಗಾಗಿ ಕೆಲಸಕ್ಕಾಗಿ ಯು. ಹಂಚಿನಾಳ ಗ್ರಾಮದಿಂದ ಕೂಲಿ ಕೆಲಸಕ್ಕೆ ತೆರಳಿತ್ತಿದ್ದರು. ಕೂಲಿ ಕೆಲಸ ಮುಗಿಸಿಕೊಂಡು ವಾಪಸ್ ಗ್ರಾಮಕ್ಕೆ ಮರಳುವ ವೇಳೆ ಗದ್ರಟಗಿ ಗ್ರಾಮದ ಬಳಿ ಟ್ರ್ಯಾಕ್ಟರ್ ಟ್ರಾಲಿ ಪಲ್ಟಿಯಾಗಿದೆ. ಟ್ರಾಲಿಯಲ್ಲಿ ಸುಮಾರು 15ಕ್ಕೂ ಹೆಚ್ಚು ಕೂಲಿ ಕಾರ್ಮಿಕರಿದ್ದು, 10ಕ್ಕೂ ಹೆಚ್ಚು ಕೂಲಿ ಕಾರ್ಮಿಕರಿಗೆ ಗಾಯಗೊಂಡಿದ್ದಾರೆ ಎನ್ನಲಾಗುತ್ತಿದೆ.