ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಗೋರೆಬಾಳ ಗ್ರಾಮದ ಬಳಿ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಘಟನೆಯಲ್ಲಿ ಐದಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಸೋಮಲಾಪುರ ಗ್ರಾಮದ ಅಂಬಾಮಠ ಜಾತ್ರೆ ಮುಗಿಸಿಕೊಂಡು ವಾಪಸ್ ಬರುತ್ತಿದ್ದಾಗ ಮಾರ್ಗ ಮಧ್ಯೆ ಟ್ರ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ ಟ್ರಾಕ್ಟರ್ನಲ್ಲಿದ್ದ 5 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.