ರಾಯಚೂರು: ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ಕಾರ್ಮಿಕ ಸಂಘಗಳ ಜಂಟಿ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ರಾಯಚೂರು: ವಿವಿಧ ಬೇಡಿಕೆ ಈಡೇರಿಕೆಗೆ ಕಾರ್ಮಿಕ ಸಂಘಗಳ ಪ್ರತಿಭಟನೆ - protest in Raichur
ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ಕಾರ್ಮಿಕ ಸಂಘಗಳ ಜಂಟಿ ಸಮಿತಿಯಿಂದ ರಾಯಚೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.
ವಿವಿಧ ಬೇಡಿಕೆ ಈಡೇರಿಕೆಗೆ ಕಾರ್ಮಿಕ ಸಂಘಗಳ ಪ್ರತಿಭಟನೆ
ಕೋವಿಡ್-19 ಅನ್ನು ವೈದ್ಯಕೀಯ ತುರ್ತು ಪರಿಸ್ಥಿತಿ ಎಂದು ಘೋಷಣೆ ಮಾಡಬೇಕು. ಆದಾಯ ತೆರಿಗೆ ವ್ಯಾಪ್ತಿಯ ಹೊರಗಡೆ ಇರುವ ಜನತೆಗೆ ಪ್ರತಿತಿಂಗಳು 7500 ರೂಪಾಯಿಯಂತೆ 6 ತಿಂಗಳು ಧನ ಸಹಾಯ ಮಾಡಬೇಕು. ಯೋಜನಾ ನೌಕರರಿಗೆ ಕೊರೊನಾ ಕೆಲಸದ ಪ್ರೋತ್ಸಾಹ ಧನ ಕೊಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಮೂಲಕ ಪ್ರಧಾನಿಗೆ ಮನವಿ ಸಲ್ಲಿಸಿದರು