ರಾಯಚೂರು:ಕಾರ್ ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ಸ್ವಾನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.
ರಾಯರ ದರ್ಶನಕ್ಕೆ ತೆರಳುತ್ತಿದ್ದ ಭಕ್ತರ ಕಾರ್ ಪಲ್ಟಿ..ಸ್ಥಳದಲ್ಲೆ ಇಬ್ಬರ ದುರ್ಮರಣ - ರಾಯಚೂರಲ್ಲಿ ಕಾರ್ ಅಪಘಾತ ಸುದ್ದಿ
ಮಂತ್ರಾಲಯಕ್ಕೆ ತೆರಳುವ ಮಾರ್ಗಮಧ್ಯೆ ಕಾರ್ ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ಸ್ವಾನ್ನಪ್ಪಿರುವ ದುರ್ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.
ಇಬ್ಬರ ದುರ್ಮರಣ
ರಾಯಚೂರು ತಾಲೂಕಿನ ಗಿಲ್ಲೆಸೂಗೂರು ಕ್ಯಾಂಪ್ ಬಳಿ ಈ ದುರ್ಘಟನೆ ಜರುಗಿದೆ. ರಾಯಚೂರು ನಗರದ ಐಡಿಎಂಎಸ್ ಲೇಔಟ್ ನಿವಾಸಿಗಳಾದ ರಾಜಶೇಖರ(33), ಕೃಷ್ಣ(30) ಮೃತರು. ರಾಯಚೂರಿನಿಂದ ಮಂತ್ರಾಲಯಕ್ಕೆ ತೆರಳುವ ವೇಳೆ ಕಾರ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎನ್ನಲಾಗಿದೆ. ಇಡಪನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.