ರಾಯಚೂರು: ದಿನದಿಂದ ದಿನಕ್ಕೆ ಕೊರೊನಾ ತನ್ನ ಅಟ್ಟಹಾಸ ಮುಂದುವರೆಸಿದೆ. ಜಿಲ್ಲೆಯಲ್ಲಿ ಇಂದು ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ.
ರಾಯಚೂರಿನಲ್ಲಿ ಕೊರೊನಾಗೆ ಇಬ್ಬರು ಬಲಿ - Raichur covid cases
ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇಂದು ಇಬ್ಬರು ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ..
Raichur
ರಾಯಚೂರು ತಾಲೂಕಿನ ಶಕ್ತಿನಗರದ 65 ವರ್ಷದ ವೃದ್ಧ ಜುಲೈ 21ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಕೊರೊನಾ ಸೋಂಕಿರುವುದು ದೃಢಪಟ್ಟಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಜಿಲ್ಲೆಯ ಮಾನವಿಯ 55 ವರ್ಷದ ವ್ಯಕ್ತಿಯೊಬ್ಬರನ್ನು ಜುಲೈ 15ರಂದು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇವರು ಸಹ ಇಂದು ಚಿಕಿತ್ಸೆ ಫಲಕಾರಿಯಾಗಿದೆ ಮೃತ ಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.