ರಾಯಚೂರು: ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿ ದಿನದಿಂದ ದಿನಕ್ಕೆ ತನ್ನ ಅಟ್ಟಹಾಸ ಮುಂದುವರೆಸಿದ್ದು, ಇಂದು ಸಹ ಇಬ್ಬರು ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ರಾಯಚೂರಿನಲ್ಲಿ ಕೊರೊನಾಗೆ ಇಬ್ಬರು ಬಲಿ: ಮೃತರ ಸಂಖ್ಯೆ 19 ಕ್ಕೆ ಏರಿಕೆ - ರಾಯಚೂರು ಕೊರೊನಾ ಸೋಂಕಿತ ಸಾವು ನ್ಯೂಸ್
ರಾಯಚೂರು ಜಿಲ್ಲೆಯಲ್ಲಿ ಇಂದು ಇಬ್ಬರು ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 19 ಕ್ಕೆ ಏರಿಕೆಯಾಗಿದೆ.

Raichur
ನಗರದ ಬೇರೂನ್ ಕಿಲ್ಲಾ ನಿವಾಸಿಯಾದ 50 ವರ್ಷದ ವ್ಯಕ್ತಿ ಉಸಿರಾಟದ ತೊಂದರೆಯಿಂದ ಕಳೆದ ಜು.15 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಅವರ ವರದಿ ಪಾಸಿಟಿವ್ ಬಂದಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಇನ್ನು ಸ್ಟೇಷನ್ ರಸ್ತೆಯ 73 ವರ್ಷದ ವ್ಯಕ್ತಿ ಕೂಡ ಉಸಿರಾಟದ ಸಮಸ್ಯೆಯಿಂದ ಬುಧವಾರ ಆಸ್ಪತ್ರೆಗೆ ದಾಖಲಾಗಿದ್ದರು. ಇವರು ಸಹ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಒಟ್ಟು ಜಿಲ್ಲೆಯಲ್ಲಿ ಮೃತರ ಸಂಖ್ಯೆ 19 ಕ್ಕೆ ಏರಿಕೆಯಾಗಿದೆ.