ರಾಯಚೂರು: ನಿಂತ ಕ್ರೂಷರ್ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಮಲ್ಲಟ ಗ್ರಾಮದಲ್ಲಿ ನಡೆದಿದೆ.
ಕ್ರೂಷರ್ ವಾಹನಕ್ಕೆ ಲಾರಿ ಡಿಕ್ಕಿ: ಇಬ್ಬರು ಸಾವು - Two died in road accident at raichur
ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಮಲ್ಲಟ ಗ್ರಾಮದಲ್ಲಿ ಕ್ರೂಷರ್ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ.
ಅಪಘಾತ
ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಮಲ್ಲಟ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ವಿರೂಪಾಕ್ಷ(35), ಹುಸೇನಿ (45) ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ರಸ್ತೆ ಬದಿಯಲ್ಲಿ ಕ್ರೂಷರ್ ವಾಹನ ನಿಲ್ಲಿಸಿಕೊಂಡು ಅಲ್ಲಿಯೇ ಇಬ್ಬರು ವ್ಯಕ್ತಿಗಳು ನಿಂತಿದ್ದ ವೇಳೆ ಏಕಾಏಕಿ ಬಂದ ಲಾರಿ ಡಿಕ್ಕಿ ಹೊಡೆದಿದೆ. ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.