ರಾಯಚೂರು:ಜಿಲ್ಲೆಯಲ್ಲಿ ಇಂದು ಇಬ್ಬರು ಕೊರೊನಾ ಸೋಂಕಿಗೆ ಬಲಿಯಾಗಿದ್ದು, ನಗರದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
Raichur
ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ನಗರದ ಬೆರೋನ್ ಕಿಲ್ 50 ವರ್ಷದ ವ್ಯಕ್ತಿ ಹಾಗೂ ಎಲ್‌ಬಿಎಸ್ ನಗರದ 54 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ.
ಈ ಇಬ್ಬರು ವ್ಯಕ್ತಿಗಳ ಗಂಟಲು ದ್ರವವನ್ನು ಸಂಗ್ರಹಿಸಿ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಪ್ರಯೋಗಾಲಯದ ವರದಿ ಪಾಸಿಟಿವ್ ಬಂದಿದ್ದರಿಂದ ಚಿಕಿತ್ಸೆಗಾಗಿ ಕೋವಿಡ್ ವಾರ್ಡ್ಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ.