ರಾಯಚೂರು:ರಾಯಚೂರು - ಮಂತ್ರಾಲಯ ಹೆದ್ದಾರಿಯ ಯರಗೇರಾ ಗ್ರಾಮದ ಸಾಯಿಬಾಬಾ ದೇವಾಸ್ಥಾನದ ಹತ್ತಿರ ಸಂಜೆ ವೇಳೆಗೆ ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ.
ಲಾರಿ ಬೈಕ್ ನಡುವೆ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು - bike raiders died
ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಯರಗೇರಾ ಗ್ರಾಮದ ಹತ್ತಿರ ಸಂಭವಿಸಿದೆ.
ಲಾರಿ ಬೈಕ್ ನಡುವೆ ಡಿಕ್ಕಿ: ಸ್ಥಳದಲ್ಲೆ ಇಬ್ಬರು ಸಾವು
ಮಂತ್ರಾಲಯದಿಂದ ರಾಯಚೂರಿಗೆ ಹೊರಟಿದ್ದ ದ್ವಿಚಕ್ರ ವಾಹನ ಹಾಗೂ ರಾಯಚೂರಿನಿಂದ ಬರುತ್ತಿದ್ದ ಲಾರಿ ನಡುವೆ ಅಪಘಾತ ಸಂಭವಿಸಿದೆ. ಮೃತರು ರಾಯಚೂರು ನಗರದ ಮಡ್ಡಿಪೇಟೆ ನಿವಾಸಿಗಳಾದ ಪ್ರವೀಣ್, ಶರತ್ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:ದಟ್ಟ ಮಂಜಿನಿಂದ ಅವಾಂತರ.. ಮರಕ್ಕೆ ಕಾರು ಡಿಕ್ಕಿಯಾಗಿ ನಾಲ್ವರು ದುರ್ಮರಣ