ರಾಯಚೂರು:ಕಾಲುವೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಬಟ್ಟೆ ತೊಳೆಯಲೆಂದು ಕಾಲುವೆಗೆ ಹೋಗಿದ್ದ ಇಬ್ಬರು ಯುವಕರು ನೀರುಪಾಲು
ರಾಯಚೂರಿನ ದೇವದುರ್ಗ ತಾಲೂಕಿನ ಪಲಕನಮರಡಿ ಗ್ರಾಮದ ಬಳಿಯ ನಾರಾಯಣಪುರ ಬಲದಂಡೆ ಕಾಲುವೆಯಲ್ಲಿ ಬಟ್ಟೆ ತೊಳೆಯಲು ಹೋದ ಯುವಕರಿಬ್ಬರು ನೀರುಪಾಲಾದ ಘಟನೆ ನಡೆದಿದೆ.
ಬಟ್ಟೆ ತೊಳೆಯಲು ಹೋದವರು ನೀರು ಪಾಲು
ಜಿಲ್ಲೆಯ ದೇವದುರ್ಗ ತಾಲೂಕಿನ ಪಲಕನಮರಡಿ ಗ್ರಾಮದ ಬಳಿಯ ನಾರಾಯಣಪುರ ಬಲದಂಡೆ ಕಾಲುವೆಯಲ್ಲಿ ಈ ದುರಂತ ಸಂಭವಿಸಿದೆ. ರವಿಚಂದ್ರ (26), ಗಂಗಪ್ಪ (21) ನೀರುಪಾಲಾದ ಯುವಕರು ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ತೆರಳಿ, ಇಬ್ಬರ ಮೃತದೇಹಗಳನ್ನು ಹೊರ ತೆಗೆದಿದ್ದಾರೆ. ಬಳಿಕ ಮರಣೋತ್ತರ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.