ರಾಯಚೂರು :ವ್ಯಕ್ತಿಯನ್ನ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ತಾಲೂಕಿನ ಕಲಮಲ ಗ್ರಾಮದ ಹೊರವಲಯದ ಬೆಟ್ಟದ ಬಳಿ ಈ ದುರ್ಘಟನೆ ಸಂಭವಿಸಿದೆ.
ರಾಯಚೂರಿನಲ್ಲಿ ಅಪರಿಚಿತ ವ್ಯಕ್ತಿಯ ಬರ್ಬರ ಕೊಲೆ
ಜಿಲ್ಲೆಯ ಕಲಮಲ ಗ್ರಾಮದಲ್ಲಿ ಭೀಕರ ಕೊಲೆಯೊಂದು ನಡೆದಿದ್ದು, ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ.
ಅಪರಿಚಿತ ವ್ಯಕ್ತಿಯ ಬರ್ಬರ ಕೊಲೆ
ಸುಮಾರು 26 ವರ್ಷದ ವ್ಯಕ್ತಿಯನ್ನ ಚಾಕುವಿನಿಂದ ಕತ್ತು ಕೊಯ್ದು ಕೊಲೆ ಮಾಡಿರಬಹುದು ಎಂದು ಹೇಳಲಾಗುತ್ತಿದೆ. ಹತ್ಯೆಯಾದ ವ್ಯಕ್ತಿ ಗುರುತು ಪತ್ತೆಯಾಗಿಲ್ಲ. ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ರಾಯಚೂರು ಗ್ರಾಮೀಣ ಠಾಣೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿ, ತನಿಖೆ ಕೈಗೊಂಡಿದ್ದಾರೆ.