ರಾಯಚೂರು:ನಾರಾಯಣಪುರ ಬಲದಂಡೆಯ ಮುಖ್ಯ ಕಾಲುವೆಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆಯಾದೆ.
ನಾರಾಯಣಪುರ ನಾಲೆಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ - ಲಿಂಗಸೂಗೂರು ತಾಲೂಕಿನ ದೇವರಭೂಪುರ
ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ದೇವರಭೂಪುರ ಗ್ರಾಮದ ಹೊರವಲಯದಲ್ಲಿರುವ ನಾರಾಯಣಪುರ ಬಲದಂಡೆ ಮುಖ್ಯ ನಾಲೆಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ.
![ನಾರಾಯಣಪುರ ನಾಲೆಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ](https://etvbharatimages.akamaized.net/etvbharat/prod-images/768-512-4647845-thumbnail-3x2-rcr.jpg)
ಅಪರಿಚಿತ ಮಹಿಳೆ ಶವ ಪತ್ತೆ
ಜಿಲ್ಲೆಯ ಲಿಂಗಸೂಗೂರು ತಾಲೂಕಿನ ದೇವರಭೂಪುರ ಗ್ರಾಮದ ಹೊರವಲಯದಲ್ಲಿರುವ ನಾರಾಯಣಪುರ ಬಲದಂಡೆ ಮುಖ್ಯ ನಾಲೆಯಲ್ಲಿ ಸುಮಾರು 35 ವರ್ಷದ ಮಹಿಳೆಯ ಶವ ಪತ್ತೆಯಾಗಿದೆ. ಗ್ರಾಮಸ್ಥರು ನಾಲೆಗೆ ತೆರಳಿದಾಗ ಕಾಲುವೆಯಲ್ಲಿ ಮಹಿಳೆಯ ಶವ ತೇಲುತ್ತಿರುವುದು ಕಂಡು ಬಂದಿದೆ.
ಅಪರಿಚಿತ ಮಹಿಳೆ ಶವ ಪತ್ತೆ
ಇದರಿಂದರಿಂದ ಗಾಬರಿಗೊಂಡ ಗ್ರಾಮಸ್ಥರು, ಲಿಂಗಸೂಗೂರು ಪೊಲೀಸರಿಗೆ ಮಾಹಿತಿ ನೀಡಿದ್ದು, ಮಾಹಿತಿ ಆಧಾರದ ಮೇಲೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಲಿಂಗಸೂಗೂರು ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.