ರಾಯಚೂರು:ಜಿಲ್ಲೆಯಲ್ಲಿ ಏಮ್ಸ್ ಸ್ಥಾಪನೆಗೆ ಆಗ್ರಹಿಸಿ ರಕ್ತದಿಂದ ಸಹಿ ಸಂಗ್ರಹಿಸುವ ಮೂಲಕ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲಾಯಿತು. ನಗರದ ಮಹಾತ್ಮ ಗಾಂಧೀಜಿ ಪುತ್ಥಳಿಯ ಹತ್ತಿರ ಜಿಲ್ಲಾ ಏಮ್ಸ್ ಹೋರಾಟ ಸಮಿತಿ ಕಳೆದ 50 ದಿನದಿಂದ ಸತತ ಹೋರಾಟದ ನಡೆಸುತ್ತಿದೆ. ಇಂದು ಹೋರಾಟ 50ನೇ ದಿನಕ್ಕೆ ಕಾಲಿಟ್ಟ ಹಿನ್ನೆಲೆಯಲ್ಲಿ, ವಿಶೇಷವಾಗಿ ರಕ್ತದ ಸಹಿಯುಳ್ಳ ಪತ್ರಗಳನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸುವ ಮೂಲಕ ಹೋರಾಟ ತೀವ್ರಗೊಳಿಸಲಾಯಿತು.
ಕಳೆದ ಹಲವು ದಿನಗಳಿಂದ ನಿರಂತರವಾಗಿ ಹೋರಾಟ ನಡೆಯುತ್ತಿದ್ದರೂ, ಇಲ್ಲಿವರೆಗೂ ಯಾವುದೇ ಸರ್ಕಾರ ಸ್ಪಂದಿಸುತ್ತಿಲ್ಲ. ಇದರಿಂದ ಇಂದು 5 ಸಾವಿರಕ್ಕೂ ಅಧಿಕ ಜನರ ರಕ್ತದ ಸಹಿಯುಳ್ಳ ಪತ್ರಗಳನ್ನು, ಕೇಂದ್ರ ಸರ್ಕಾರಕ್ಕೆ ಕಳಿಸುವ ಮೂಲಕ ಚಳವಳಿಯನ್ನು ತೀವ್ರಗೊಳಿಸಿದ್ದಾರೆ. ರಕ್ತದ ಸಹಿ ಮಾಡಲು ಜಿಲ್ಲೆಯ ಹಿರಿಯ ನಾಗರಿಕರು, ವಿವಿಧ ಸಂಘಟನೆಯ ಮುಖಂಡರು, ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು, ಯುವಕರು ಭಾಗವಹಿಸಿದ್ದರು.