ಕೊಪ್ಪಳ: ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವ ಭರವಸೆ ನೀಡಿ ಈವರೆಗೂ ಸರ್ಕಾರ ಆ ಬಗ್ಗೆ ಮಾತನಾಡಿಲ್ಲ. ಹೀಗಾಗಿ ಮತ್ತೆ ಹೋರಾಟಕ್ಕಿಳಿಯಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಕಾರ್ಯದರ್ಶಿ ಕೌಶಲ್ಯ ಹಿರೇಗೌಡರ್ ಹೇಳಿದ್ದಾರೆ.
ವಿವಿಧ ಬೇಡಿಕೆ ಈಡೇರದ ಹಿನ್ನೆಲೆ ಮತ್ತೊಮ್ಮೆ ಹೋರಾಟಕ್ಕೆ ಸಜ್ಜಾದ ಆಶಾ ಕಾರ್ಯಕರ್ತೆಯರು - ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ
ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವ ಭರವಸೆ ನೀಡಿ ಈವರೆಗೂ ಸರ್ಕಾರ ಆ ಬಗ್ಗೆ ಮಾತನಾಡಿಲ್ಲ. ಹೀಗಾಗಿ ಮತ್ತೆ ಹೋರಾಟಕ್ಕಿಳಿಯಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಕಾರ್ಯದರ್ಶಿ ಕೌಶಲ್ಯ ಹಿರೇಗೌಡರ್ ಹೇಳಿದ್ದಾರೆ.
ನಗರದ ಮೀಡಿಯಾ ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಸಿಕ ಕನಿಷ್ಠ 12 ಸಾವಿರ ರೂಪಾಯಿ ವೇತನ ನೀಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯದ ಆಶಾ ಕಾರ್ಯಕರ್ತೆಯರು ಈ ಹಿಂದೆ ಪ್ರತಿಭಟನೆ ನಡೆಸಿದ್ದರು. ಆಗ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರು ಬೇಡಿಕೆ ಈಡೇರಿಸುವ ಭರವಸೆ ನೀಡಿ ಪ್ರತಿಭಟನೆ ಕೈ ಬಿಡುವಂತೆ ಮನವಿ ಮಾಡಿದ್ದರು. ಅವರು ನೀಡಿದ ಭರವಸೆ ಹಿನ್ನೆಲೆಯಲ್ಲಿ ಪ್ರತಿಭಟನೆ ಕೈಬಿಡಲಾಗಿತ್ತು.
ಆದರೆ ಅವರು ಭರವಸೆ ನೀಡಿ ಒಂದೂವರೆ ತಿಂಗಳಾದರೂ ಇನ್ನೂ ಬೇಡಿಕೆ ಈಡೇರಿಲ್ಲ. ಅಲ್ಲದೆ ಆಶಾ ಕಾರ್ಯಕರ್ತೆಯರಿಗೆ ವಿವಿಧ ಸರ್ವೆ ಸೇರಿದಂತೆ ಹೆಚ್ಚಿನ ಕೆಲಸದ ಹೊರೆ ಹೊರಿಸಲಾಗುತ್ತಿದೆ. ಅನೇಕ ಆಶಾ ಕಾರ್ಯಕರ್ತೆಯರು ಈಗಾಗಲೇ ಕೊರೊನಾ ಸೋಂಕಿಗೆ ತುತ್ತಾಗುತ್ತಿದ್ದಾರೆ. ಸರ್ಕಾರ ಹುಸಿ ಭರವಸೆ ನೀಡಿ ಆಶಾ ಕಾರ್ಯಕರ್ತೆಯರನ್ನು ದುಡಿಸಿಕೊಳ್ಳುತ್ತಿದೆ. ಈವರೆಗೆ ಬೇಡಿಕೆ ಈಡೇರದ ಕಾರಣ ಇದೇ ಸೆಪ್ಟೆಂಬರ್ 21ರಂದು ನಡೆಯಲಿರುವ ಅಧಿವೇಶನದ ಸಂದರ್ಭದಲ್ಲಿ ರಾಜ್ಯದಾದ್ಯಂತ ಆಶಾ ಕಾರ್ಯಕರ್ತೆಯರು ಮತ್ತೆ ಹೋರಾಟಕ್ಕೆ ಇಳಿಯುವ ನಿರ್ಧಾರ ಮಾಡಲಾಗಿದೆ.