ರಾಯಚೂರು: ಮಂಗಳೂರು ಗಲಭೆಯಲ್ಲಿ ಮೃತಪಟ್ಟವರಿಗೆ ತನಿಖೆ ನಡೆಸಿ ಪರಿಹಾರ ನೀಡಬೇಕು ಎಂದು ಆರೋಗ್ಯ ಇಲಾಖೆ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆ ಒಪ್ಪಿಸಲಾಗುತ್ತಿದ್ದು, ತನಿಖೆಯಲ್ಲಿ ಎಲ್ಲವೂ ಬಯಲಿಗೆ ಬರಲಿದೆ ಎಂದ ಅವರು, ಹಿಂದೂಗಳ ಮೇಲೆ ಮುಸ್ಲಿಂರನ್ನು ,ಮುಸ್ಲಿಂರ ಮೇಲೆ ಹಿಂದೂಗಳನ್ನು ಎತ್ತಿಕಟ್ಟುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಈ ಕಲ್ಲು ತೂರಾಟದಲ್ಲಿ ಜೀವ ಕಳೆದುಕೊಂಡವರ ಕುರಿತು ನ್ಯಾಯಾಂಗ ತನಿಖೆಗೆ ಆದೇಶ ನೀಡಲಾಗಿದ್ದು, ಪರಿಹಾರವನ್ನು ನೀಡಬೇಕು ಎಂದರು.