ಕರ್ನಾಟಕ

karnataka

ETV Bharat / state

ನಿವೃತ್ತಿ ಬಳಿಕ ಗ್ರಾಮಕ್ಕೆ ಬಂದ ಯೋಧನಿಗೆ ಅದ್ಧೂರಿ ಸ್ವಾಗತ

ಸತತ 17 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ ಬಳಿಕ ನಿವೃತ್ತಿ ಹೊಂದಿದ್ದಾರೆ. ನಿವೃತ್ತಿ ಬಳಿಕ ಇಂದು ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಸಿರವಾರನ ಯುವ ಬ್ರಿಗೇಡ್ ಕಾರ್ಯಕರ್ತರು ಬೈಕ್ ರ್ಯಾಲಿ ನಡೆಸಿ ಹೂಗುಚ್ಛ ನೀಡಿ ಸ್ವಾಗತಿಸಿದ್ದಾರೆ..

ಯೋಧನಿಗೆ  ರಾಯಚೂರಿನಲ್ಲಿ ಅದ್ಧೂರಿ  ಸ್ವಾಗತ
ಯೋಧನಿಗೆ ರಾಯಚೂರಿನಲ್ಲಿ ಅದ್ಧೂರಿ ಸ್ವಾಗತ

By

Published : Oct 2, 2020, 5:10 PM IST

ರಾಯಚೂರು :ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ಇದೀಗ ನಿವೃತ್ತಿ ಹೊಂದಿ ಇಂದು ತನ್ನ ಸ್ವಗ್ರಾಮಕ್ಕೆ ಮರಳಿದ ಯೋಧನಿಗೆ ಜಿಲ್ಲೆಯ ಸಿರವಾರ ತಾಲೂಕಿನ ಕಡದಿನ್ನಿ ಗ್ರಾಮಸ್ಥರು ಆತ್ಮೀಯ ಸ್ವಾಗತ ಕೋರಿದರು.

2003ರಲ್ಲಿ ಕಡದಿನ್ನಿ ಗ್ರಾಮದ ಬಾಲಯ್ಯ ಎಂಬುವರು ಸೇನೆ ಸೇರಿದ್ದರು. ಸೇನೆಗೆ ಸೇರಿದ ಬಳಿಕ ಸಿಕ್ಕಿಂ, ಜಮ್ಮು-ಕಾಶ್ಮೀರ, ಅಲಹಾಬಾದ್​ನಲ್ಲಿ ಸೇವೆ ಸಲ್ಲಿಸಿದ್ದರು. 2016ರಲ್ಲಿ ನಡೆದ ಉರಿ ದಾಳಿಯಲ್ಲಿ ಹೋರಾಡಿ ಪ್ರಾಣಪಾಯದಿಂದ ಪಾರಾಗಿದ್ದರು.

ಸತತ 17 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ ಬಳಿಕ ನಿವೃತ್ತಿ ಹೊಂದಿದ್ದಾರೆ. ನಿವೃತ್ತಿ ಬಳಿಕ ಇಂದು ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಸಿರವಾರನ ಯುವ ಬ್ರಿಗೇಡ್ ಕಾರ್ಯಕರ್ತರು ಬೈಕ್ ರ್ಯಾಲಿ ನಡೆಸಿ ಹೂಗುಚ್ಛ ನೀಡಿ ಸ್ವಾಗತಿಸಿದ್ದಾರೆ.

ಯೋಧನಿಗೆ ರಾಯಚೂರಿನಲ್ಲಿ ಅದ್ದೂರಿ ಸ್ವಾಗತ

ದೇಶದ ಗಡಿಯಲ್ಲಿ ಜೀವದ ಹಂಗು ತೊರೆದು 17 ವರ್ಷಗಳ‌ ಕಾಲ ಸೇವೆ ಸಲ್ಲಿಸಿದ ಯೋಧನಿಗೆ ಆತ್ಮೀಯವಾಗಿ ಬರ ಮಾಡಿಕೊಳ್ಳುವ ಮೂಲಕ ಗೌರವ ಸಲ್ಲಿಸಲಾಗಿದೆ.

ABOUT THE AUTHOR

...view details