ಕರ್ನಾಟಕ

karnataka

ETV Bharat / state

ರಾಯಚೂರು: ನಿವೃತ್ತ ಯೋಧನಿಗೆ ಗ್ರಾಮಸ್ಥರಿಂದ ಅದ್ಧೂರಿ ಸ್ವಾಗತ - Raichur solider grand welcome news

ಕಳೆದ 34 ವರ್ಷಗಳಿಂದ ದೇಶ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ತವರಿಗೆ ಮರಳಿದ ವೀರ ಯೋಧನನ್ನು ಲಿಂಗಸುಗೂರು ತಾಲೂಕಿನ ಮಟ್ಟೂರು ಗ್ರಾಮಸ್ಥರು ಅದ್ಧೂರಿಯಾಗಿ ಸ್ವಾಗತಿಸಿದರು.

Raichur
ನಿವೃತ್ತ ಯೋಧನಿಗೆ ಗ್ರಾಮಸ್ಥರಿಂದ ಅದ್ಧೂರಿ ಸ್ವಾಗತ

By

Published : Feb 4, 2022, 12:14 PM IST

ರಾಯಚೂರು: ಸುದೀರ್ಘ 34 ವರ್ಷಗಳ ಕಾಲ ಭಾರತೀಯ ಸೈನ್ಯದಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಬಳಿಕ ಸ್ವಗ್ರಾಮಕ್ಕೆ ಮರಳಿದ ವೀರಯೋಧನನ್ನು ಗ್ರಾಮಸ್ಥರು ಅದ್ಧೂರಿಯಾಗಿ ಸ್ವಾಗತಿಸಿ ಗೌರವ ಸಲ್ಲಿಸಿದರು.

ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮಟ್ಟೂರು ಗ್ರಾಮದ ಪಂಪಣ್ಣ.ಎ.ಜಾವೂರು, ಸೇನಾ ನಿವೃತ್ತಿ ಹೊಂದಿ ಸ್ವಗ್ರಾಮಕ್ಕೆ ಆಗಮಿಸಿದ್ದರು. ಈ ವೇಳೆ ಗ್ರಾಮಸ್ಥರು ವೀರಯೋಧನನ್ನು ಕುದುರೆ ಮೇಲೆ ಗ್ರಾಮದ ಪ್ರಮುಖ ಬಡಾವಣೆಗಳ ರಸ್ತೆ ಮೇಲೆ ಬ್ಯಾಂಡ್ ಮೇಳದೊಂದಿಗೆ ಅದ್ಧೂರಿಯಾಗಿ ಮೆರವಣಿಗೆ ಮಾಡಿ, ಕುಣಿದು, ಕುಪ್ಪಳಿಸಿದರು. ನಂತರ ಕಾರ್ಯಕ್ರಮ ಆಯೋಜಿಸಿ ಯೋಧನನ್ನು ಸನ್ಮಾನಿಸಿ ಗೌರವಿಸಲಾಯಿತು.

ನಿವೃತ್ತ ಯೋಧನಿಗೆ ಗ್ರಾಮಸ್ಥರಿಂದ ಅದ್ಧೂರಿ ಸ್ವಾಗತ

ಓದಿ:ಮಾ.12ಕ್ಕೆ ನಿಗದಿಯಾಗಿದ್ದ ನೀಟ್‌ ಪಿಜಿ ಪರೀಕ್ಷೆ ಮುಂದೂಡಿಕೆ

ಪ್ರಾಣವನ್ನೂ ಲೆಕ್ಕಿಸದೆ ಕಳೆದ 34 ವರ್ಷಗಳಿಂದ ದೇಶ ಸೇವೆ ಸಲ್ಲಿಸಿ ತವರಿಗೆ ಮರಳಿದ ಯೋಧನನ್ನು ಬಾರಮಾಡಿಕೊಳ್ಳಲು ಇಡೀ‌ ಗ್ರಾಮದಲ್ಲಿ ಹಬ್ಬದ ಸಂಭ್ರಮ ಮನೆಮಾಡಿತ್ತು.

ABOUT THE AUTHOR

...view details