ರಾಯಚೂರು :ವಲಸೆ ಹೋಗಿದ್ದ ಕೂಲಿ ಕಾರ್ಮಿಕರು ಮರಳಿ ಗ್ರಾಮಕ್ಕೆ ಬಂದಿದ್ದಾರೆ. ಗ್ರಾಮದ ಶಾಲೆಯಲ್ಲಿ ಕ್ವಾರಂಟೈನ್ ಮಾಡಲು ಗ್ರಾಮಸ್ಥರು ವಿರೋಧ ಮಾಡಿರುವ ಪ್ರಸಂಗ ನಡೆದಿದೆ.
ಜಿಲ್ಲೆಯ ಮಸ್ಕಿ ತಾಲೂಕಿನ ತೋರಣದಿನ್ನಿ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಕೆಲಸ ಅರಸಿ ಮಹಾರಾಷ್ಟ್ರಕ್ಕೆ ತೆರಳಿದ್ದ ಮೂವರು ಕೂಲಿ ಕಾರ್ಮಿಕರು ಲಾಕ್ಡೌನ್ನಲ್ಲಿ ಸಿಲುಕಿಕೊಂಡಿದ್ರು.
ಶಾಲೆಯಲ್ಲಿ ಕ್ವಾರಂಟೈನ್ಗೆ ಗ್ರಾಮಸ್ಥರ ವಿರೋಧ.. ಇದೀಗ ವಲಸೆ ಹೋಗಿದ್ದ ಕಾರ್ಮಿಕರು ಮರಳಿ ಗ್ರಾಮಕ್ಕೆ ಬಂದಿದ್ದಾರೆ. ಅವರನ್ನು ಗ್ರಾಮದ ಶಾಲೆಯಲ್ಲಿ ಕ್ವಾರಂಟೈನ್ ಮಾಡಲು ಅಧಿಕಾರಿಗಳು ಮುಂದಾಗಿದ್ರು. ಈ ವೇಳೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದರು.
ಬಳಿಕ ಅಧಿಕಾರಿಗಳು ಗ್ರಾಮಸ್ಥರಿಗೆ ತಿಳಿ ಹೇಳುವ ಮೂಲಕ ಶಾಲೆಯಲ್ಲಿಯೇ ಕಾರ್ಮಿಕರನ್ನು ಕ್ವಾರಂಟೈನ್ನಲ್ಲಿರಿಸಲಾಯಿತು.