ಕರ್ನಾಟಕ

karnataka

ದೇವರಭೂಪುರದಲ್ಲಿ ವಾಂತಿ,ಭೇದಿ ಪ್ರಕರಣಗಳು ನಿಯಂತ್ರಣದಲ್ಲಿವೆ: ಆರೋಗ್ಯಾಧಿಕಾರಿ ಸ್ಪಷ್ಟನೆ

By

Published : Apr 12, 2020, 4:34 PM IST

ಲಿಂಗಸುಗೂರು ತಾಲ್ಲೂಕು ದೇವರಭೂಪುರ ಪ್ರದೇಶದಲ್ಲಿ ವಾಂತಿ, ಭೇದಿ ಪ್ರಕರಣಗಳು ಕಾಣಿಕೊಂಡಿದೆ. ಈವರೆಗೆ 24 ಪ್ರಕರಣಗಳು ದಾಖಲಾಗಿದ್ದು, ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ರೋಗಿಗಳು ಗುಣಮುಖರಾಗುತ್ತಿದ್ದು, ಜನತೆ ಭಯಪಡುವ ಅಗತ್ಯವಿಲ್ಲ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರುದ್ರಗೌಡ ಪಾಟೀಲ ತಿಳಿಸಿದ್ದಾರೆ.

Vomiting diarrhea cases are under control in Devarabhupur
ದೇವರಭೂಪುರದಲ್ಲಿ ವಾಂತಿ ಭೇದಿ ಪ್ರಕರಣಗಳು ನಿಯಂತ್ರಣದಲ್ಲಿವೆ: ಆರೋಗ್ಯಾಧಿಕಾರಿ ಸ್ಪಷ್ಟನೆ

ಲಿಂಗಸುಗೂರು/ ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲ್ಲೂಕು ದೇವರಭೂಪುರ ಪ್ರದೇಶದಲ್ಲಿನ ವಾಂತಿ, ಭೇದಿ ಪ್ರಕರಣಗಳು ನಿಯಂತ್ರಣದಲ್ಲಿದ್ದು, ಜನತೆ ಭಯಪಡಬೇಕಿಲ್ಲ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರುದ್ರಗೌಡ ಪಾಟೀಲ ತಿಳಿಸಿದ್ದಾರೆ.

ದೇವರಭೂಪುರದಲ್ಲಿ ವಾಂತಿ ಭೇದಿ ಪ್ರಕರಣಗಳು ನಿಯಂತ್ರಣದಲ್ಲಿವೆ: ಆರೋಗ್ಯಾಧಿಕಾರಿ ಸ್ಪಷ್ಟನೆ

ಈ ಬಗ್ಗೆ ಮಾತನಾಡಿದ ಅವರು, ದಶಕಗಳ ಅವಧಿಯಲ್ಲಿ ಮೊದಲ ಬಾರಿಗೆ ಈ ಪ್ರದೇಶದಲ್ಲಿ ವಾಂತಿ, ಭೇದಿ ಪ್ರಕರಣಗಳು ಕಾಣಿಕೊಂಡಿವೆ. ಈವರೆಗೆ 24 ಪ್ರಕರಣಗಳು ದಾಖಲಾಗಿವೆ. ರೋಗಿಗಳಿಗೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಅವರು ಗುಣಮುಖರಾಗುತ್ತಿದ್ದಾರೆ. ಅರೋಗ್ಯ ಇಲಾಖೆ ಸಿಬ್ಬಂದಿ ಪ್ರತಿ ಮನೆ ಮನೆಗೆ ಭೇಟಿ ನೀಡಿ ಆರೋಗ್ಯ ಜಾಗೃತಿ ಮೂಡಿಸುವುದರೊಂದಿಗೆ ಮಾತ್ರೆ ನೀಡುತ್ತಿದ್ದಾರೆ ಎಂದು ತಿಳಿಸಿದರು.

ಕೊರೊನಾ ಭೀತಿ ಎದುರಿಸುತ್ತಿರುವ ಸಂದರ್ಭದಲ್ಲಿ ದೇವರಭೂಪುರ ಗ್ರಾಮದಲ್ಲಿ ಇಂಥ ಪ್ರಕರಣ ಕಾಣಿಸಿಕೊಂಡಿದ್ದರಿಂದ ಭಾನುವಾರ ಆರೋಗ್ಯ ಮತ್ತು ಪೊಲೀಸ್ ಇಲಾಖೆ ತಾಲ್ಲೂಕು ಮಟ್ಟದ ಹಿರಿಯ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For All Latest Updates

ABOUT THE AUTHOR

...view details