ಕರ್ನಾಟಕ

karnataka

ETV Bharat / state

ನಾರಾಯಣಪುರ ಜಲಾಶಯದಿಂದ ಕೃಷ್ಣ ನದಿಗೆ ನೀರು: ಸೇತುವೆ, ಹೊಲ-ಗದ್ದೆ ಮುಳುಗಡೆ - water released to krishna river

ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಶೀಲಹಳ್ಳಿ-ಹಂಚಿನಾಳ ಗ್ರಾಮ ಮಧ್ಯೆ ಇರುವ ಸೇತುವೆ ಸಂಪೂರ್ಣ ಜಲಾವೃತಗೊಂಡಿದ್ದು, ಸೇತುವೆ ಮೇಲೆ 4 ಅಡಿಯಷ್ಟು ನೀರು ರಭಸವಾಗಿ ಹರಿಯುತ್ತಿದೆ. ಜತೆಗೆ ನಡುಗಡ್ಡೆ ಪ್ರದೇಶದ ಗ್ರಾಮಗಳಲ್ಲಿನ ಹೊಲಗಳಿಗೆ ನೀರು ನುಗ್ಗಿದೆ.

ನಾರಾಯಣಪುರ ಜಲಾಶಯದಿಂದ ಕೃಷ್ಣ ನದಿಗೆ ನೀರು

By

Published : Aug 2, 2019, 5:35 PM IST

Updated : Aug 2, 2019, 5:42 PM IST

ರಾಯಚೂರು: ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿಬಿಟ್ಟ ಪರಿಣಾಮ ಶೀಲಹಳ್ಳಿ ಸೇತುವೆ ಮುಳಗಡೆಗೊಂಡರೆ, ರೈತರ ಹೊಲ-ಗದ್ದೆಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ.

ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಶೀಲಹಳ್ಳಿ-ಹಂಚಿನಾಳ ಗ್ರಾಮ ಮಧ್ಯೆ ಇರುವ ಸೇತುವೆ ಸಂಪೂರ್ಣ ಜಲಾವೃತಗೊಂಡಿದ್ದು, ಸೇತುವೆ ಮೇಲೆ 4 ಅಡಿಯಷ್ಟು ನೀರು ರಭಸವಾಗಿ ಹರಿಯುತ್ತಿದೆ. ಜತೆಗೆ ನಡುಗಡ್ಡೆ ಪ್ರದೇಶದ ಗ್ರಾಮಗಳಲ್ಲಿನ ಹೊಲಗಳಿಗೆ ನೀರು ನುಗ್ಗಿದೆ.

ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ ನೀರು

ದೇವದುರ್ಗ ತಾಲೂಕಿನ ಹೂವಿನಹೆಡಗಿ ಗ್ರಾಮದ ಬಳಿಯ ರಾಯಚೂರು-ಕಲಬುರಗಿ ಸಂಪರ್ಕ ಕಲ್ಪಿಸುವ ಸೇತುವೆಯ ಹತ್ತಿರ ಅಪಾಯದ ಮಟ್ಟದಲ್ಲಿ ನೀರು ಹರಿಯುವ ಹಿನ್ನೆಲೆ ಬ್ರಿಡ್ಜ್ ಮೇಲೆ ವಾಹನಗಳ ಸಂಚಾರವನ್ನು ನಿಷೇಧಿಸುವ ಮೂಲಕ ಪೊಲೀಸ್ ಭದ್ರತೆ ಒದಗಿಸಲಾಗಿದೆ.

Last Updated : Aug 2, 2019, 5:42 PM IST

ABOUT THE AUTHOR

...view details