ETV Bharat Karnataka

ಕರ್ನಾಟಕ

karnataka

ETV Bharat / state

ಸುಪ್ರೀಂ ತೀರ್ಪು ಸಂತಸ ತಂದಿದೆ: ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್​ ಪುತ್ರ - prasanna patil reaction about supreme judgment

ಅನರ್ಹ ಶಾಸಕರ ವಿಚಾರದಲ್ಲಿ ಸುಪ್ರೀಂಕೋರ್ಟ್ ತೀರ್ಪನ್ನ ಸ್ವಾಗತಿಸುತ್ತೇವೆ ಎಂದು ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್ ಪುತ್ರ ಹೇಳಿದ್ದಾರೆ.

ಸುಪ್ರೀಂ ತೀರ್ಪು ಸಂತಸ ತಂದಿದೆ
author img

By

Published : Nov 13, 2019, 4:12 PM IST

ರಾಯಚೂರು: ಅನರ್ಹ ಶಾಸಕರಿಗೆ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಅವಕಾಶ ನೀಡಿರುವ ಸುಪ್ರೀಂಕೋರ್ಟ್ ತೀರ್ಪನ್ನ ಸ್ವಾಗತಿಸುತ್ತೇವೆ ಎಂದು ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್ ಪುತ್ರ ಪ್ರಸನ್ನ ಪಾಟೀಲ್ ಹೇಳಿದ್ದಾರೆ.

ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿನ ಅವರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನರ್ಹಗೊಂಡಿರುವ 17 ಜನ ಶಾಸಕರಿಗೆ ಬರುವ ಉಪ ಚುನಾವಣೆಯಲ್ಲಿ ಸ್ಪರ್ಧೆಗೆ ಅವಕಾಶ ಕಲ್ಪಿಸಿಕೊಟ್ಟಿದ್ದು, ಈ ತೀರ್ಪು ಸಂತಸ ತಂದಿದೆ. ನಮ್ಮ ತಂದೆಯವರು ಕ್ಷೇತ್ರದ ಅಭಿವೃದ್ಧಿಗಾಗಿ ರಾಜೀನಾಮೆ ನೀಡಿದ್ರು. ಹೀಗಾಗಿ ಮುಂಬರುವ ದಿನಗಳಲ್ಲಿ ಮಸ್ಕಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದ್ರು.

ಸುಪ್ರೀಂ ತೀರ್ಪು ಸಂತಸ ತಂದಿದೆ: ಪ್ರಸನ್ನ ಪಾಟೀಲ್​

ಇನ್ನು ಸುಪ್ರೀಂಕೋರ್ಟ್ ತೀರ್ಪು ಹಿನ್ನೆಲೆ ಪ್ರತಾಪಗೌಡ ಪಾಟೀಲ್ ಬೆಂಬಲಿಗರು ಮತ್ತು ಅಭಿಮಾನಿಗಳು ಮಸ್ಕಿ ಪಟ್ಟಣದಲ್ಲಿ ಪಟಾಕಿ ಸಿಡಿಸಿ ಸಂಭ್ರಮ ಆಚರಿಸುವುದರ ಜತೆಗೆ ಶ್ರೀಮಲ್ಲಿಕಾರ್ಜುನ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಿದ್ರು.

ABOUT THE AUTHOR

...view details