ಕರ್ನಾಟಕ

karnataka

ETV Bharat / state

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ನಾವು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ : ಸಚಿವ ಶ್ರೀರಾಮುಲು - state govt is doing devopment projects to kalyana karnataka

ಕಲ್ಯಾಣ ಕರ್ನಾಟಕ ಭಾಗದಲ್ಲಿ ಬದಲಾವಣೆ ತರಲು, ‌ನಾನು ಮತ್ತು ಸಿಎಂ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ. ದೇಶದ 112 ಮಹತ್ವಾಕಾಂಕ್ಷಿ ಜಿಲ್ಲೆಗಳ ಪಟ್ಟಿಯಲ್ಲಿ ರಾಯಚೂರು ಜಿಲ್ಲೆಯೂ ಇದೆ‌. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ನಮ್ಮ ಸರ್ಕಾರ 3 ಸಾವಿರ ಕೋಟಿ ರೂಪಾಯಿ ನೀಡಿರುವುದಾಗಿ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

we-are-trying-to-develop-the-kalyana-karnataka-says-minister-shriramulu
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ನಾವು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ : ಶ್ರೀರಾಮುಲು

By

Published : Jun 12, 2022, 7:37 PM IST

ರಾಯಚೂರು :ಕಲ್ಯಾಣ ಕರ್ನಾಟಕ ಭಾಗದಲ್ಲಿ ಬದಲಾವಣೆ ತರಲು, ‌ನಾನು ಮತ್ತು ಸಿಎಂ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ ಎಂದು ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ‌. ಜಿಲ್ಲೆಯ ಸಿಂಧನೂರು ತಾಲೂಕಿನ ಜವಳಗೇರಾ ಗ್ರಾಮ ಮೊರಾರ್ಜಿ ವಸತಿ ಶಾಲೆ ಉದ್ಘಾಟಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೊರಾರ್ಜಿ ವಸತಿ ಶಾಲೆಯಲ್ಲಿ 250 ವಿದ್ಯಾರ್ಥಿಗಳು ಇದ್ದಾರೆ. 11 ಎಕರೆ 20 ಗುಂಟೆ ಸ್ಥಳದಲ್ಲಿ ಶಾಲೆ ನಿರ್ಮಾಣ ಮಾಡಲಾಗಿದೆ ಎಂದರು.

ಮಕ್ಕಳು ಒಳ್ಳೆಯ ಶಿಕ್ಷಣ ಪಡೆಯಬೇಕು. ಶಿಕ್ಷಣಕ್ಕೆ ದೊಡ್ಡ ಶಕ್ತಿ ಇದೆ. ಕತ್ತಲಿನಲ್ಲಿರುವವರನ್ನು ಬೆಳಕಿಗೆ ತರುವುದು ಶಿಕ್ಷಣ. ನಮ್ಮ ಶಾಲೆಗಳಲ್ಲಿ ಉತ್ತಮ ಶಿಕ್ಷಣ ವ್ಯವಸ್ಥೆ ಇದ್ದು, ಖಾಸಗಿ ಶಾಲಾ ಕಾಲೇಜಿಗಳಿಗಿಂತಲೂ ಉತ್ತಮ ಶಿಕ್ಷಣವನ್ನು ನೀಡಲಾಗುತ್ತಿದೆ. ಉತ್ತಮ ಪ್ರಜೆಗಳನ್ನು ನಿರ್ಮಿಸಲು ನಮ್ಮ ಶಾಲೆಗಳು ಮುಂದಾಗಿವೆ. ಸಮಗ್ರ ಅಭಿವೃದ್ಧಿಯ ಜೊತೆಗೆ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತೇವೆ‌. ಹಂತ ಹಂತವಾಗಿ ಸಮಾಜದಲ್ಲಿ ಆರ್ಥಿಕ ಅಭಿವೃದ್ಧಿಗೂ ನಾವು ಕೆಲಸ ಮಾಡುತ್ತಿದ್ದೇವೆಎಂದು ಸಚಿವ ಶ್ರೀರಾಮುಲು ತಿಳಿಸಿದರು.

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ನಾವು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ ಎಂದು ಸಚಿವ ಶ್ರೀರಾಮುಲು ಹೇಳಿದರು.

ದೇಶದ 112 ಮಹತ್ವಾಕಾಂಕ್ಷಿ ಜಿಲ್ಲೆಗಳ ಪಟ್ಟಿಯಲ್ಲಿ ರಾಯಚೂರು ಜಿಲ್ಲೆಯೂ ಇದೆ‌. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ನಮ್ಮ ಸರ್ಕಾರ 3 ಸಾವಿರ ಕೋಟಿ ರೂಪಾಯಿ ನೀಡಿದೆ. ಶಿಕ್ಷಣಕ್ಕೆ ಒತ್ತು ನೀಡುವುದೇ ನಮ್ಮ ಸರ್ಕಾರದ ಗುರಿ ಎಂದು ಹೇಳಿದರು.

ಓದಿ :ಪಬ್​ಜಿ ಗೇಮ್ ಸೋತಿದ್ದಕ್ಕೆ ಸ್ನೇಹಿತರಿಂದ ಗೇಲಿ: ನೇಣಿಗೆ ಶರಣಾದ ಕಾಂಗ್ರೆಸ್​ ಮುಖಂಡನ ಮಗ!

ABOUT THE AUTHOR

...view details