ರಾಯಚೂರು: ಜಿಲ್ಲೆಯಲ್ಲಾದ ಮಳೆಯಿಂದ ಸಂಭವಿಸಿರುವ ಬೆಳೆ ಹಾನಿಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಪರಿಹಾರಕ್ಕೆ ಮನವಿ ಮಾಡಲಾಗುವುದು ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ತಿಳಿಸಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಳೆಯಿಂದ ಸಾವಿರಾರು ಎಕರೆ ಪ್ರದೇಶದ ಬೆಳೆ ನಾಶವಾಗಿದೆ. ಬೆಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ರೈತರ ಸಮಸ್ಯೆಯನ್ನು ಆಲಿಸಿದ್ದೇನೆ. ಹಾನಿ ಕುರಿತು ವರದಿ ನೀಡಲು ಜಿಲ್ಲಾಧಿಕಾರಿ ಹಾಗೂ ಇತರೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ನವೆಂಬರ್ ಅಂತ್ಯದೊಳಗೆ ಸರ್ವೇ ಕಾರ್ಯ ಮುಗಿಯಬೇಕು. ಡಿಸೆಂಬರ್ 1 ರಿಂದ ರೈತರಿಗೆ ಪರಿಹಾರ ನೀಡುವ ಕಾರ್ಯವಾಗಬೇಕು ಅಂತ ಸೂಚಿಸಿದ್ದೇನೆ ಎಂದರು.