ರಾಯಚೂರು:ಹೊಲದಲ್ಲಿ ಕೆಲಸ ಮಾಡುವಾಗ ಮಹಿಳೆಗೆ ಹಾವು ಕಚ್ಚಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಮೃತಪಟ್ಟಿದ್ದಾರೆ. ಜಿಲ್ಲೆಯ ಲಿಂಗಸುಗೂರು ತಾಲೂಕಿನ ಪೂಜಾರಿ ತಾಂಡದಲ್ಲಿ ಈ ಅವಘಡ ಸಂಭವಿಸಿದೆ. ಸವಿತಾ ವೆಂಕಟೇಶ್ (25) ಮೃತ ಮಹಿಳೆ.
ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಹಾವು ಕಚ್ಚಿ ಮಹಿಳೆ ಸಾವು - snake
ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಹಾವು ಕಚ್ಚಿ ಮಹಿಳೆ ಸಾವು- ಲಿಂಗಸುಗೂರಿನಲ್ಲಿ ಘಟನೆ
ಹಾವು ಕಚ್ಚಿ ಮಹಿಳೆ ಸಾವು
ಭಾನುವಾರ ಸವಿತಾ ಅವರು ಹೊಲದಲ್ಲಿ ಎಳ್ಳು ಕೊಯ್ಯುತ್ತಿರುವಾಗ ಹಾವು ಕಚ್ಚಿದೆ. ಕೂಡಲೇ ಅವರನ್ನು ಮುದಗಲ್ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಕರೆದುಕೊಂಡು ಹೋಗಲಾಗಿದೆ. ಆದ್ರೆ ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮುದಗಲ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
ಇದನ್ನೂ ಓದಿ:ಬಳ್ಳಾರಿ: ಮಲಗಿದ್ದ ಬಾಲಕಿಗೆ ಹಾವು ಕಚ್ಚಿ ಸಾವು