ರಾಯಚೂರು:ಹೊಲದಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.
ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ : ಕೊಲೆ ಶಂಕೆ - Raichur crimec news
ಜಿಲ್ಲೆಯ ಮಸ್ಕಿ ತಾಲೂಕಿನ ಅಮರಾವತಿ ಗ್ರಾಮದ ಬಳಿ ಈರಪ್ಪ ಎನ್ನುವವರ ಹೊಲದಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ.

ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ
ಜಿಲ್ಲೆಯ ಮಸ್ಕಿ ತಾಲೂಕಿನ ಅಮರಾವತಿ ಗ್ರಾಮದ ಬಳಿ ಈರಪ್ಪ ಎನ್ನುವವರ ಹೊಲದಲ್ಲಿ ಶವ ಪತ್ತೆಯಾಗಿದೆ. ಮಹಿಳೆಯ ದೇಹ ಭಾಗಃಶ ಸುಟ್ಟು ಕರಕಲಾಗಿದ್ದು, ಕಾಲು ಹಾಗೂ ಕೈಗಳು ಮಾತ್ರ ಕಾಣುತ್ತಿವೆ. ಮುಖದ ಗುರುತು ಪತ್ತೆಯಾಗದ ರೀತಿಯಲ್ಲಿ ಸಂಪೂರ್ಣ ದೇಹ ಸುಟ್ಟು ಕರಕಲಾಗಿದೆ.
ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ
ಘಟನಾ ಸ್ಥಳಕ್ಕೆ ಮಸ್ಕಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮಹಿಳೆಯ ಗುರುತು ಪತ್ತೆಯಾಗಿಲ್ಲ. ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.