ರಾಯಚೂರು: ಗುಲ್ಬರ್ಗಾ ವಿಶ್ವವಿದ್ಯಾಲಯ ವ್ಯಾಪ್ತಿಗೆ ಬರುವ ಯರಗೇರಾ ಸ್ನಾತಕೋತ್ತರ ಕೇಂದ್ರವನ್ನು ವಿಶ್ವವಿದ್ಯಾನಿಲಯ ಮಾಡಬೇಕೆಂದು ಎಸ್ಎಫ್ಐ ಸಂಘಟನೆ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
ಯರಗೇರಾ ಸ್ನಾತಕೋತ್ತರ ಕೇಂದ್ರವನ್ನು ವಿವಿ ಮಾಡಬೇಕೆಂದು ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ - ಗುಲ್ಬರ್ಗಾ ವಿಶ್ವವಿದ್ಯಾಲಯ
ಯರಗೇರಾ ಸ್ನಾತಕೋತ್ತರ ಕೇಂದ್ರವನ್ನು ವಿಶ್ವವಿದ್ಯಾನಿಲಯ ಮಾಡಬೇಕೆಂದು ಎಸ್ಎಫ್ಐ ಸಂಘಟನೆ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
ವಿದ್ಯಾರ್ಥಿಗಳ ಪ್ರತಿಭಟನೆ
ರಾಯಚೂರು ತಾಲೂಕಿನ ಯರಗೇರಾ ಗ್ರಾಮದ ಬಳಿ ಇರುವ ಯರಗೇರಾ ಪಿಜಿ ಸೆಂಟರ್ನ ಮುಖ್ಯ ದ್ವಾರದ ಬಳಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಇದೇ ವೇಳೆ ಪಿಜಿ ಸೆಂಟರ್ ಗ್ರಂಥಾಲಯ, ವಸತಿ ನಿಲಯ, ಶುದ್ಧ ಕುಡಿಯುವ ನೀರು, ಪ್ರಾಧ್ಯಾಪಕರು, ಸಿಬ್ಬಂದಿಯ ನೇಮಕ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುಂತೆ ಕುಲಪತಿ ಪ್ರೊ. ಪರಿಮಳ ಎ. ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.