ರಾಯಚೂರು: ವಿಷ ಸೇವಿಸಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಸಿರವಾರ ತಾಲೂಕಿನ ಮಲ್ಲಟ ಗ್ರಾಮದ ಹೊರವಲಯದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ.
ಮಹೇಶ್(20), ಅಕ್ಷತಾ(19) ಆತ್ಮಹತ್ಯೆ ಮಾಡಿಕೊಂಡಿರುವ ಪ್ರೇಮಿಗಳೆಂದು ಗುರುತಿಸಲಾಗಿದೆ. ಇಬರಿಬ್ಬರು ಬೇರೆ ಬೇರೆ ಸಮುದಾಯಕ್ಕೆ ಸೇರಿದವರು ಎನ್ನಲಾಗ್ತಿದೆ. ಅಕ್ಷತಾ ನಿನ್ನೆ ಮನೆಯಿಂದ ತೆರಳಿದ್ದು, ರಾತ್ರಿಯಾದರೂ ಮನೆಗೆ ವಾಪಸ್ ಆಗಿರಲಿಲ್ಲ. ಹೀಗಾಗಿ ಯುವತಿ ಪಾಲಕರು ಹುಡುಕಾಟ ನಡೆಸಿದ್ದು, ಗ್ರಾಮದ ಹೊರವಲಯದಲ್ಲಿ ಇಬ್ಬರ ಮೃತದೇಹಳು ಪತ್ತೆಯಾಗಿವೆ.