ರಾಯಚೂರು:ಉತ್ತರ ಪ್ರದೇಶದ ಹಥ್ರಾಸ್ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕುಟುಂಬಕ್ಕೆ ಸಾಂತ್ವನ ಹೇಳಲು ಹೋಗಿದ್ದ ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರಿಗೆ ಭೇಟಿಗೆ ಅವಕಾಶ ನೀಡದ ಉತ್ತರ ಪ್ರದೇಶ ಬಿಜೆಪಿ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ನಡೆ ಖಂಡಿಸಿ ಯುವ ಕಾಂಗ್ರೆಸ್ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
ಹಥ್ರಾಸ್ ಅತ್ಯಾಚಾರ ಪ್ರಕರಣ; ಯುಪಿ, ಕೇಂದ್ರ ಸರ್ಕಾರದ ನಡೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ - ಯುಪಿಯಲ್ಲಿ ರಾಹುಲ್ ಗಾಂಧಿ ಭೇಟಿಗೆ ವಿರೋಧ
ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟಿಸಿದ ಪದಾಧಿಕಾರಿಗಳು, ಉತ್ತರ ಪ್ರದೇಶದ ಹಥ್ರಾಸ್ನಲ್ಲಿ ಯುವತಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಖಂಡನೀಯವಾಗಿದ್ದು, ಪ್ರಕರಣವನ್ನು ಮುಚ್ಚಿ ಹಾಕಲು ಅಲ್ಲಿನ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಯುವ ಮುಖಂಡ ರವಿ ಬೋಸರಾಜ್ ಮಾತನಾಡಿ, ನೊಂದ ಕುಟುಂಬಕ್ಕೆ ಸಾಂತ್ವನ ಹೇಳಲು ಹೊರಟಿದ್ದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರನ್ನು ದಾರಿಯಲ್ಲಿ ತಡೆದು ಭೇಟಿಗೆ ಅವಕಾಶ ನೀಡದೆ ಅವಮಾನಿಸಿದ್ದು, ಕೂಡಲೇ ರಾಷ್ಟ್ರಪತಿಗಳು ಮಧ್ಯ ಪ್ರವೇಶ ಮಾಡಿ ಸರ್ವಾಧಿಕಾರಿ ಧೋರಣೆಯ ರಾಜ್ಯ ಸರ್ಕಾರದ ವಿರುದ್ಧ ಕ್ರಮ ಕೈಗೊಳ್ಳಬೇಕು, ಅತ್ಯಾಚಾರ ಸಂತ್ರಸ್ತೆ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.