ರಾಯಚೂರು:ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕನಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಯುವಕ ಸ್ಥಳದಲ್ಲೇ ಸ್ವಾನ್ನಪ್ಪಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ತುರುವಿಹಾಳ ಗ್ರಾಮದ ಕೆಇಬಿ ಬಳಿ ನಡೆದಿದೆ.
ಮೃತನನ್ನು ತುರುವಿಹಾಳ ಗ್ರಾಮದ ಬಸವರಾಜ(22) ಎಂದು ಗುರುತಿಸಲಾಗಿದೆ. ಹೊಲಕ್ಕೆ ಹೋಗಿ ವಾಪಸ್ ಮನೆಗೆ ಮರಳಬೇಕಾದ್ರೆ ಕುಷ್ಟಗಿ ಕಡೆಯಿಂದ ಬರುತ್ತಿದ್ದ ಕಾರು ಬಸವರಾಜನಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ತಲೆಗೆ ತೀವ್ರವಾದ ಪೆಟ್ಟು ಬಿದ್ದು ರಕ್ತ ಸ್ರಾವವಾದ ಕಾರಣ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.