ರಾಮನಗರ:ಜಿಲ್ಲೆಯಲ್ಲಿ ಚನ್ನಪಟ್ಟಣ 22, ಕನಕಪುರ 16, ಮಾಗಡಿ 25 ಮತ್ತು ರಾಮನಗರ 43 ಪ್ರಕರಣಗಳು ಸೇರಿದಂತೆ ಒಟ್ಟು 106 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇಲ್ಲಿಯವರೆಗೆ ಜಿಲ್ಲೆಯಲ್ಲಿ 3,869 ಪ್ರಕರಣಗಳು ದಾಖಲಾಗಿವೆ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ತಿಳಿಸಿದ್ದಾರೆ.
ಸಾವು...
ನಿನ್ನೆ ಚನ್ನಪಟ್ಟಣ ತಾಲೂಕಿನಲ್ಲಿ ಒಬ್ಬರು ಹಾಗೂ ಕನಕಪುರ ತಾಲೂಕಿನಲ್ಲಿ ಒಬ್ಬರು ಕೊರೊನಾಗೆ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ 48 ಮಂದಿ ನಿಧನರಾಗಿದ್ದಾರೆ.