ಕರ್ನಾಟಕ

karnataka

ETV Bharat / state

ರಾಮನಗರದಲ್ಲಿ ಇಂದು 116 ಹೊಸ ಪ್ರಕರಣ ; ಒಂದು ಸಾವು - ರಾಮನಗರದಲ್ಲಿ ಇಂದು 116 ಹೊಸ ಪ್ರಕರಣ

ರಾಮನಗರದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಛಾಗುತ್ತಿದ್ದು ಇಂದೂ 116 ಪ್ರಕರಣಗಳು ದಾಖಲಾಗಿವೆ. ಒಂದು ಸಾವು ಸಂಭವಿಸಿದೆ.

dc archana
ಎಂ.ಎಸ್‌ ಅರ್ಚನಾ

By

Published : Aug 19, 2020, 7:12 PM IST

ರಾಮನಗರ:ದಿನದಿಂದ‌ ದಿನಕ್ಕೆ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಜಿಲ್ಲೆಯಾದ್ಯಂತ ಇಂದು 116 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಒಂದು ಸಾವು ‌ ಸಂಭವಿಸಿದೆ.

ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,496 ಕ್ಕೇರಿಕೆಯಾಗಿದೆ ಎಂದು ಜಿಲ್ಲಾಡಳಿತ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಜಿಲ್ಲೆಯ ಚನ್ನಪಟ್ಟಣ ತಾಲೂಕಿನಲ್ಲಿ- 42, ಮಾಗಡಿ -7 ಕನಕಪುರ -32 ಹಾಗೂ ರಾಮನಗರ ತಾಲೂಕಿನಲ್ಲಿ -35 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ‌. ಸೋಂಕಿತರನ್ನ ಚಿಕಿತ್ಸೆಗಾಗಿ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.

ಚಿಕಿತ್ಸೆ ಫಲಕಾರಿಯಾಗದೆ ಚನ್ನಪಟ್ಟಣ ತಾಲೂಕಿನಲ್ಲಿ ಇಂದು ಮತ್ತೊಬ್ಬರು ಸಾವನ್ನಪ್ಪಿದ್ದು, ಕಳೆದ 3 ದಿನಗಳಲ್ಲಿ ಚನ್ನಪಟ್ಟಣದಲ್ಲಿಯೇ 3 ಸಾವಿನ‌ ಪ್ರಕರಣಗಳು ದಾಖಲಾಗಿದೆ. ಜಿಲ್ಲೆಯಲ್ಲಿ ಕೊರೊನಾ ಸಾವಿನ ಸಂಖ್ಯೆ ಒಟ್ಟು 28ಕ್ಕೆ ಏರಿಕೆಯಾಗಿದೆ.

ಇಂದು 15 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಜಿಲ್ಲೆಯಲ್ಲಿ ಈವರೆಗೆ ಒಟ್ಟು 1,650 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಇನ್ನು ಈವರೆಗೆ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ 2496ಕ್ಕೆ ಏರಿಕೆಯಾಗಿದ್ದು ,ಅವುಗಳಲ್ಲಿ 818 ಸಕ್ರಿಯ ಪ್ರಕರಣಗಳಿದ್ದು ಸೋಂಕಿತರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್‌ ಅರ್ಚನಾ ತಿಳಿಸಿದ್ದಾರೆ.

ABOUT THE AUTHOR

...view details