ರಾಮನಗರ:ಜಿಲ್ಲೆಯಲ್ಲಿ ಇಂದು 19 ಜನರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 281ಕ್ಕೆ ಏರಿಕೆಯಾಗಿದೆ.
ರಾಮನಗರದಲ್ಲಿಂದು 19 ಜನರಿಗೆ ಕೊರೊನಾ: ಸೋಂಕಿತರ ಸಂಖ್ಯೆ 281ಕ್ಕೆ ಏರಿಕೆ - Ramanagara Corona news
ಜಿಲ್ಲೆಯಲ್ಲಿಂದು 19 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 281ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 118 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
Ramanagara corona case
ಈ ಪೈಕಿ ಮಾಗಡಿ ತಾಲೂಕಿನಲ್ಲಿ 3 ಪ್ರಕರಣ, ರಾಮನಗರ ತಾಲೂಕಿನಲ್ಲಿ 14 ಪ್ರಕರಣ, ಚನ್ನಪಟ್ಟಣ ತಾಲೂಕಿನಲ್ಲಿ 2 ಪ್ರಕರಣ ಕಂಡು ಬಂದಿದ್ದು, ಇವರನ್ನು ಚಿಕಿತ್ಸೆಗಾಗಿ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಲ್ಲದೇ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 13 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಇಂದು ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 118 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.