ರಾಮನಗರ: ಮುಂದಿನ ಒಂದು ವಾರದೊಳಗೆ ಜಿಲ್ಲಾ ಕೇಂದ್ರದಲ್ಲಿ 240 ಆಕ್ಸಿಜನ್ ಬೆಡ್‌ಗಳ ವ್ಯವಸ್ಥೆ ಮಾಡಲಾಗುವುದು ಹಾಗೂ ಜಿಲ್ಲೆಯ ಒಟ್ಟು 62 ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ತಲಾ ಒಂದೊಂದು ಕೋವಿಡ್ ಕೇರ್ ಸೆಂಟರ್ ತೆರೆಯಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.
ಸಂಸದ ಡಿ.ಕೆ. ಸುರೇಶ್ ಹಾಗೂ ಜಿಲ್ಲೆಯ ಉನ್ನತ ಅಧಿಕಾರಿಗಳ ಜತೆ ವರ್ಚುವಲ್ ಸಭೆ ನಡೆಸಿದ ಡಿಸಿಎಂ, ರಾಮನಗರದ ಹೊಸ ಜಿಲ್ಲಾಸ್ಪತ್ರೆಯಲ್ಲಿ 120 ಹಾಗೂ ಕಂದಾಯ ಭವನದಲ್ಲಿ 120 ಆಕ್ಸಿಜನ್ ಬೆಡ್‌ಗಳ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.
ಸದ್ಯಕ್ಕೆ ಜಿಲ್ಲೆಯ ಸೋಂಕಿತರ ಸಂಖ್ಯೆಗೆ ಹೋಲಿಸಿದರೆ ಆಕ್ಸಿಜನ್ ಬೆಡ್‌ಗಳ ಸಮಸ್ಯೆ ಇಲ್ಲ. ಆದರೂ ಮುನ್ನೆಚ್ಚರಿಕೆಯಿಂದ ಇಷ್ಟು ಹೊಸ ಬೆಡ್‌ಗಳನ್ನು ಹಾಕಲಾಗುತ್ತಿದೆ. ಅದೇ ರೀತಿ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿರುವ ಶಾಲೆ-ಹಾಸ್ಟೆಲ್‌ಗಳಲ್ಲಿ ಕೋವಿಡ್ ಕೇರ್ ಸೆಂಟರ್‌ಗಳನ್ನು ತೆರೆಯಲಾಗುತ್ತಿದೆ. ಈಗಿನ ಅಂಕಿ-ಅಂಶಗಳ ಪ್ರಕಾರ ಜಿಲ್ಲೆಯಲ್ಲಿ ಒಟ್ಟು 2,800 ಸೋಂಕಿತರು ಮನೆಗಳಲ್ಲೇ ಕ್ವಾರಂಟೈನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದು, ಅವರೆಲ್ಲರನ್ನೂ ಕೋವಿಡ್ ಕೇರ್ ಸೆಂಟರ್‌ಗಳಿಗೆ ಶಿಫ್ಟ್ ಮಾಡಲಾಗುವುದು ಎಂದು ಡಿಸಿಎಂ ಸಭೆಗೆ ತಿಳಿಸಿದರು.