ರಾಮನಗರ: ಇಂದು ಬೆಳಗ್ಗೆ ಮಾಗಡಿಯ ಹಾಗಲಕೋಟೆ ಹ್ಯಾಂಡ್ಪೋಸ್ಟ್ ಬಳಿ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿ ಪ್ರಯಾಣಿಸುತ್ತಿದ್ದ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ರಾಮನಗರದಲ್ಲಿ ಗಾರ್ಮೆಂಟ್ಸ್ ಬಸ್- ಬೈಕ್ ನಡುವೆ ಡಿಕ್ಕಿ....30 ಜನರಿಗೆ ಗಾಯ - ಮಾಗಡಿ ಬಳಿ ಗಾರ್ಮೆಂಟ್ಸ್ ಬಸ್ ಅಪಘಾತ ಸುದ್ದಿ
ಗಾರ್ಮೆಂಟ್ಸ್ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ 30 ಕಾರ್ಮಿಕರು ಗಾಯಗೊಂಡಿರುವ ಘಟನೆ ರಾಮನಗರ ಜಿಲ್ಲೆ ಮಾಗಡಿಯ ಹಾಗಲಕೋಟೆ ಹ್ಯಾಂಡ್ಪೋಸ್ಟ್ ಬಳಿ ನಡೆದಿದೆ.
bus accident in ramnagar
ಮಾಗಡಿ ತಾಲೂಕಿನ ಹಾಗಲಕೋಟೆ ಹ್ಯಾಂಡ್ ಪೋಸ್ಟ್ ಬಳಿಯ ಸಾಯಿ ಗಾರ್ಮೆಂಟ್ಸ್ ಕಾರ್ಮಿಕರನ್ನ ಕರೆದೊಯ್ಯುತ್ತಿದ್ದ ಬಸ್ ಬೈಕ್ಗೆ ಡಿಕ್ಕಿ ಹೊಡೆದಿದ್ದು, 30 ಕ್ಕೂ ಹೆಚ್ಚು ಜನಕ್ಕೆ ಗಾಯಗಳಾಗಿವೆ. ಅವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಅಲ್ಲದೇ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗೆ ಬೇರೆ ಆಸ್ಪತ್ರೆಗೆ ರವಾನಿಸಲಾಗಿದೆ. ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ನಡೆದಿದೆ ಎಂದು ಗಾಯಾಳುಗಳು ಆರೋಪಿಸಿದ್ದಾರೆ.