ರಾಮನಗರ : ಕೋವಿಡ್-19 ಲಸಿಕೆ ನೀಡಲು ಪ್ರಾರಂಭವಾದ ಮೊದಲನೇ ದಿನವಾದ ಇಂದು ಜಿಲ್ಲೆಯಲ್ಲಿ ಒಟ್ಟು 350 ಜನರಿಗೆ ಲಸಿಕೆ ನೀಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ಆರ್.ಸಿ.ಹೆಚ್ ಅಧಿಕಾರಿ ಡಾ. ಪದ್ಮಅವರು ತಿಳಿಸಿದ್ದಾರೆ.
ಜಿಲ್ಲಾಸ್ಪತ್ರೆ-39, ರಾಮಕೃಷ್ಣ ಆಸ್ಪತ್ರೆ- 50, ದಯಾನಂದ ಸಾಗರ್ ಆಸ್ಪತ್ರೆ-75, ಚನ್ನಪಟ್ಟಣ ತಾಲ್ಲೂಕು ಆಸ್ಪತ್ರೆ-10, ಕನಕಪುರ ಮೆಟರ್ನಿಟಿ ಆಸ್ಪತ್ರೆ-67, ಮಾಗಡಿ ತಾಲ್ಲೂಕು ಆಸ್ಪತ್ರೆ-20, ಇಗ್ಗಲೂರು ಪ್ರಾಥಮಿಕ ಆರೋಗ್ಯ ಕೇಂದ್ರ-49, ಕನಕಪುರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ-40 ಹೀಗೆ ಒಟ್ಟು 350 ಜನರು ಲಸಿಕೆ ಪಡೆದುಕೊಂಡಿದ್ದಾರೆ.