ರಾಮನಗರ:ಕೌಟುಂಬಿಕ ಕಲಹ ಹಿನ್ನೆಲೆ ಕೆರೆಗೆ ಹಾರಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯ ಮಾಗಡಿ ತಾಲೂಕಿನ ದಮ್ಮನಕಟ್ಟೆ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದು, ಓರ್ವ ಬಾಲಕಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.
ಗ್ರಾಮದ ಸಿದ್ದಮ್ಮ(55), ಆಕೆಯ ಮಗಳು ಸುಮಿತ್ರಾ (30) ಮತ್ತು ಅಳಿಯ ಹನುಮಂತ ರಾಜು(35) ಮೃತರು. ಬಾಲಕಿ ಕೀರ್ತನಾ (11) ಸ್ಥಿತಿ ಕೂಡ ಗಂಭೀರವಾಗಿದ್ದು, ಮಾಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಒಟ್ಟು ಐವರು ಕೆರೆಗೆ ಹಾರಿ ಆತ್ಮಹತ್ಯೆಗೆ ಮುಂದಾಗಿದ್ದರು. ಆದರೆ ಅವರಲ್ಲಿ ಮೃತ ಸುಮಿತ್ರಾಳ 10 ವರ್ಷದ ಮಗಳು ಅಲ್ಲಿಂದ ತಪ್ಪಿಸಿಕೊಂಡು ಬಂದು ಗ್ರಾಮಸ್ಥರಿಗೆ ಆತ್ಮಹತ್ಯೆ ವಿಷಯ ತಿಳಿಸಿದ್ದಾಳೆ. ಕೂಡಲೇ ಗ್ರಾಮಸ್ಥರು ಬಾಲಕಿಯನ್ನು ರಕ್ಷಿಸಿದ್ದಾರೆ. ಉಳಿದ ಮೂವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.