ರಾಮನಗರ:ಕೇಂದ್ರದ ನಿರ್ದೇಶನ ಅನುಸರಿಸಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದಂತೆ ಜಿಲ್ಲೆಯಾದ್ಯಂತ ಯಾವುದೇ ಕೈಗಾರಿಕೆಗಳನ್ನು ಪುನರಾರಂಭಿಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಸ್ಪಷ್ಟಪಡಿಸಿದ್ದಾರೆ.
ಏಪ್ರಿಲ್ 19 ರಂದು ಬೆಂಗಳೂರು ನಗರದ ಜೆ.ಜೆ.ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಾದರಾಯನಪುರದಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಜಿಲ್ಲಾ ಕಾರಾಗೃಹದಲ್ಲಿರಿಸಿದ್ದ ಆರೋಪಿಗಳಲ್ಲಿ ಐವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ರಾಮನಗರದ 5 ಕಿ.ಮೀ ವ್ಯಾಪ್ತಿ ಪ್ರದೇಶವನ್ನು ಬಫರ್ ಜೋನ್ ಎಂದು ಪರಿಗಣಿಸಲಾಗಿದೆ. ಈ ವ್ಯಾಪ್ತಿಯಲ್ಲಿ ಅಗತ್ಯ ವಸ್ತುಗಳ ಪೂರೈಕೆ ಹೊರತು ಇತರೆ ಯಾವುದೇ ಅಂಗಡಿ ಮುಂಗಟ್ಟುಗಳು ತೆರೆಯಲು ಅವಕಾಶವಿರುವುದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.