ರಾಮನಗರ: ಜಿಲ್ಲೆಯಲ್ಲಿ 57 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 2,683ಕ್ಕೇರಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ತಿಳಿಸಿದರು.
ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ ಜಿಲ್ಲಾಡಳಿತದ ಹೆಲ್ತ್ ಬುಲೆಟಿನ್ ಪ್ರಕಾರ ಚನ್ನಪಟ್ಟಣ ತಾಲೂಕು 12, ಮಾಗಡಿ 03, ಕನಕಪುರ 32, ರಾಮನಗರ 10 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ ಎಂದು ಹೇಳಿದರು.
ಇಂದು ಚಿಕಿತ್ಸೆ ಫಲಕಾರಿಯಾಗದೆ ಕನಕಪುರ ತಾಲೂಕಿನ ಒಬ್ಬ ಸೋಂಕಿತ ಮೃತಪಟ್ಟಿದ್ದು, ಸಾವಿನ ಸಂಖ್ಯೆ 31ಕ್ಕೆ ಏರಿದೆ. ಆಸ್ಪತ್ರೆಯಿಂದ ಇಂದು 56 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ, ಮನೆಗೆ ಮರಳಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 1,774 ಜನರು ಗುಣಮುಖರಾಗಿದ್ದಾರೆ.
ಸದ್ಯ 878 ಸಕ್ರಿಯ ಪ್ರಕರಣಗಳಿದ್ದು, ಸೋಂಕಿತರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ 2683ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.