ರಾಮನಗರ: ಜಿಲ್ಲೆಯಲ್ಲಿ ಒಟ್ಟು 60 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರನ್ನು ಜಿಲ್ಲೆಯ ವಿವಿಧ ಕೋವಿಡ್-19 ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ತಿಳಿಸಿದ್ದಾರೆ.
ಚನ್ನಪಟ್ಟಣ 6, ಕನಕಪುರ 27, ಮಾಗಡಿ 19 ಮತ್ತು ರಾಮನಗರ 8 ಪ್ರಕರಣಗಳು ಪತ್ತೆಯಾಗಿದೆ. ಇದುವರೆಗೆ ಜಿಲ್ಲೆಯಲ್ಲಿ 6,008 ಪಾಸಿಟಿವ್ ಕೇಸ್ ದಾಖಲಾಗಿದ್ದು, 57 ಮಂದಿ ಸಾವಿಗೀಡಾಗಿದ್ದಾರೆ.