ರಾಮನಗರ:ತಾಲೂಕಿನ ಶ್ಯಾನಬೋಗನಹಳ್ಳಿ ಸಮೀಪ ಬೈಕ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದ್ದು, ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಓರ್ವ ಸಾವು, ಮತ್ತಿಬ್ಬರಿಗೆ ಗಂಭೀರ ಗಾಯ - ರಾಮನಗರ ತಾಲ್ಲೂಕಿನ ಶ್ಯಾನಬೋಗನಹಳ್ಳಿ ಸಮೀಪ ಬೈಕ್ ಅಪಘಾತ
ರಾಮನಗರ ತಾಲೂಕಿನ ಶ್ಯಾನಬೋಗನಹಳ್ಳಿ ಸಮೀಪ ಬೈಕ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದ್ದು, ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ನಿಯಂತ್ರಣ ತಪ್ಪಿದ ಬೈಕ್ ಸವಾರ ವಿದ್ಯುತ್ ಕಂಬಕ್ಕೆ ಡಿಕ್ಕಿ
ಶಾನುನೋಗನಹಳ್ಳಿಯಲ್ಲಿನ ತಿರುವಿನಲ್ಲಿ ವೇಗವಾಗಿ ಬೈಕ್ ಚಲಾಯಿಸಿಕೊಂಡು ಬರುತ್ತಿದ್ದ ವೇಳೆ ಘಟನೆ ಸಂಭವಿಸಿದ್ದು, ಸ್ಥಳದಲ್ಲೇ ಅರ್ಜುನ್ (21) ಎಂಬಾತ ಮೃತಪಟ್ಟಿದ್ದಾನೆ. ಬೈಕ್ ಮೇಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರನ್ನು ಶರಣ್ (21) ಹಾಗೂ ಕೇಶವ (21) ಎಂದು ಗುರುತಿಸಲಾಗಿದೆ.
ಈ ಮೂವರು ಬೈಕಿನಲ್ಲಿ ರಾಮನಗರದಿಂದ ಶ್ಯಾನಬೋಗನಹಳ್ಳಿಗೆ ಹೊರಟಿದ್ದರು. ರಸ್ತೆಯ ತಿರುವಿನಲ್ಲಿ ನಿಯಂತ್ರಣ ತಪ್ಪಿ ಕಂಬಕ್ಕೆ ಬೈಕ್ ಡಿಕ್ಕಿಯಾಗಿದೆ ಎನ್ನಲಾಗಿದೆ. ಈ ಸಂಬಂಧ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.