ರಾಮನಗರ: ತಂದೆಯೊಬ್ಬ ಮಗಳಿಗೆ ನೇಣು ಬಿಗಿದು ಕೊಂದು ತಾನೂ ನೇಣಿಗೆ ಶರಣಾಗಿರುವ ಘಟನೆ ತಾಲೂಕಿನ ಕಟಮಾನದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಸೆಲ್ಫಿ ವಿಡಿಯೋ ಮಾಡಿ ಮಗಳನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ತಂದೆ... ಕಾರಣ? - Ramanagar father daughter commits suicide
ಹೆಂಡತಿಗೆ ಅನೈತಿಕ ಸಂಬಂಧವಿರಬಹುದು ಎಂಬ ಅನುಮಾನದಿಂದ ಮಗಳನ್ನು ನೇಣಿಗೇರಿಸಿ ತಂದೆಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ.
![ಸೆಲ್ಫಿ ವಿಡಿಯೋ ಮಾಡಿ ಮಗಳನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ತಂದೆ... ಕಾರಣ? A father kills his daughter and commits suicide.....](https://etvbharatimages.akamaized.net/etvbharat/prod-images/768-512-7283588-thumbnail-3x2-rmn.jpg)
ಮಗಳನ್ನೂ ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ತಂದೆ.....ಕಾರಣ?
ಮಗಳನ್ನೂ ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ತಂದೆ.....ಕಾರಣ?
ರಾಮಚಂದ್ರ(38) ತನ್ನ ಮಗಳನ್ನು ನೇಣಿನ ಕುಣಿಕಿಗೆ ಹಾಕಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ತಂದೆ. ರಾಮಚಂದ್ರ ತನ್ನ ಪತ್ನಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಸಾಯುವ ಮೊದಲು ತಂದೆ-ಮಗಳು ಸೆಲ್ಫಿ ವಿಡಿಯೋ ಮಾಡಿ ನೇಣಿಗೆ ಶರಣಾಗಿದ್ದಾರೆ.
ರಾಮನಗರದಲ್ಲಿ ವಾಸವಿದ್ದ ರಾಮಚಂದ್ರ ತಡರಾತ್ರಿ ಕಟಮಾನದೊಡ್ಡಿ ಗ್ರಾಮಕ್ಕೆ ತೆರಳಿ ನೇಣಿಗೆ ಶರಣಾಗಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಪತ್ನಿ ಅಲ್ಲಿಂದ ಕಾಲ್ಕಿತ್ತಿದ್ದಾಳೆ. ಸ್ಥಳಕ್ಕೆ ರಾಮನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರೀಶಿಲನೆ ನಡೆಸಿದ್ದಾರೆ.
Last Updated : May 21, 2020, 12:47 PM IST