ರಾಮನಗರ: ಕೌಟುಂಬಿಕ ಕಲಹದ ಹಿನ್ನೆಲೆ ಬೆಳ್ಳಂಬೆಳಗ್ಗೆ ಮಚ್ಚಿನಿಂದ ಹೊಡೆದು ಮಹಿಳೆಯನ್ನ ಬರ್ಬರವಾಗಿ ಕೊಲೆ ಮಾಡಿ ಮತ್ತೋರ್ವನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ತೂಬಿನಕೆರೆ ಗ್ರಾಮದಲ್ಲಿ ನಡೆದಿದೆ.
ಮಚ್ಚಿನಿಂದ ಹೊಡೆದು ಬರ್ಬರವಾಗಿ ಕೊಲೆ : ಬೆಳ್ಳಂಬೆಳಗ್ಗೆ ರಾಮನಗರದಲ್ಲಿ ಹರಿದ ನೆತ್ತರು - A Woman Murder in ramnagar
ರಾಮನಗರದ ಚನ್ನಪಟ್ಟಣ ತಾಲೂಕಿನ ತೂಬಿನಕೆರೆ ಗ್ರಾಮದಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆ ಸಂಬಂಧಿಕನೊಬ್ಬ ಮಚ್ಚಿನಿಂದ ಹೊಡೆದು ಹಲ್ಲೆ ಮಾಡಿದ ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ..
![ಮಚ್ಚಿನಿಂದ ಹೊಡೆದು ಬರ್ಬರವಾಗಿ ಕೊಲೆ : ಬೆಳ್ಳಂಬೆಳಗ್ಗೆ ರಾಮನಗರದಲ್ಲಿ ಹರಿದ ನೆತ್ತರು ಕೊಲೆ](https://etvbharatimages.akamaized.net/etvbharat/prod-images/768-512-13995359-thumbnail-3x2-lek.jpg)
murder
ಜಯಮ್ಮ(65) ಎಂಬುವರು ಕೊಲೆಯಾದ ದುರ್ದೈವಿ. ಕೌಟುಂಬಿಕ ಕಲಹದ ಹಿನ್ನೆಲೆ ಸಂಬಂಧಿಕರೊಬ್ಬರು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಜಯಮ್ಮನ ಮಗ ಸಿದ್ದರಾಜು ಮೇಲೆ ಕೂಡ ಮಚ್ಚಿನಿಂದ ಹೊಡೆದು ಹಲ್ಲೆ ಮಾಡಿದ್ದಾರೆ. ಇಂದು ಮುಂಜಾನೆ 6 ಗಂಟೆಗೆ ಈ ಘಟನೆ ನಡೆದಿದ್ದು, ಜಯಮ್ಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ತೂಬಿನಕೆರೆ ಗ್ರಾಮದಲ್ಲಿ ನಡೆದ ಬರ್ಬರ ಕೊಲೆ
ಗಾಯಗೊಂಡ ಸಿದ್ದರಾಜು ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದು, ಆತನ ಸ್ಥಿತಿ ಕೂಡ ಗಂಭೀರವಾಗಿದೆ. ಈ ಕುರಿತು ಸ್ಥಳಕ್ಕೆ ಅಕ್ಕೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದೂರು ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.