ರಾಮನಗರ: ದೇವಸ್ಥಾನದ ಮುಂಭಾಗದಲ್ಲೇ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ನೇಣುಬಿಗಿದ ಸ್ಥಿತಿಯಲ್ಲಿ ಸಾವನ್ನಪ್ಪಿರುವ ಘಟನೆ ಹಾರೋಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕನಕಪುರ ತಾಲೂಕು ಮರಳವಾಡಿ ಹೋಬಳಿಯ ದೇವ ಆಲಮರದಹಗ್ಗು ಗ್ರಾಮದಲ್ಲಿರುವ ಮಹದೇಶ್ವರ ದೇವಸ್ಥಾನದ ಆವರಣದಲ್ಲಿ ಘಟನೆ ನಡೆದಿದೆ.

ಹೇಮಾವತಿ (32) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ದೇವಸ್ಥಾನಕ್ಕೆಂದು ಹೋದ ಮಹಿಳೆ ನಿಗೂಢವಾಗಿ ಸಾವನ್ನಪ್ಪಿದ್ದು ಮಹಿಳೆಯನ್ನು ಯಾರೋ ಕೊಲೆ ಮಾಡಿ ನಂತರ ಶವವನ್ನು ನೇಣು ಬಿಗಿದ ರೀತಿಯಲ್ಲಿ ಹಾಕಿರುವ ಶಂಕೆ ವ್ಯಕ್ತವಾಗಿದೆ.
ಹಾರೋಹಳ್ಳಿ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಸಾವಿನ ಕುರಿತು ತನಿಖೆ ಮುಂದುವರಿದಿದೆ.