ರಾಮನಗರ:ಬೆಳ್ಳಂಬೆಳಗ್ಗೆ ನಡೆದ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಬೈಕ್ಗೆ ಖಾಸಗಿ ಬಸ್ ಡಿಕ್ಕಿ: ಇಬ್ಬರು ಸವಾರರು ಸಾವು - ಚನ್ನಪಟ್ಟಣ ಸಾರ್ವಜನಿಕ ಆಸ್ಪತ್ರೆ
ರಾಮನಗರ ಜಿಲ್ಲೆಯ ಚನ್ನಪಟ್ಟಣದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್, ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸಾವರರಿಬ್ಬರು ಸಾವನ್ನಪ್ಪಿದ್ದಾರೆ.

ಬೈಕ್ಗೆ ಡಿಕ್ಕಿ ಹೊಡೆದ ಖಾಸಗಿ ಬಸ್
ಚನ್ನಪಟ್ಟಣ ತಾಲೂಕಿನ ಮಂಗಳವಾರಪೇಟೆ ಬಳಿ ಬೈಕ್ಗೆ ಪೆಟ್ರೋಲ್ ಹಾಕಿಸಿಕೊಂಡು ಹೋಗುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಕೂಡ್ಲೂರು ಗ್ರಾಮದ ಸಚಿನ್ (22), ಪ್ರತಾಪ್ (18) ಎಂಬುವರು ಮೃತಪಟ್ಟಿದ್ದಾರೆ.

ಚನ್ನಪಟ್ಟಣದ ಕೂಡ್ಲೂರು ಗ್ರಾಮದ ನಿವಾಸಿಗಳಾದ ಇಬ್ಬರೂ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸಕ್ಕೆ ಹೋಗುವ ಮಾರ್ಗ ಮಧ್ಯೆ ಅಪಘಾತ ಸಂಭವಿಸಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಚನ್ನಪಟ್ಟಣ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.