ಕರ್ನಾಟಕ

karnataka

ETV Bharat / state

ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ ...ಧಗ ಧಗನೆ ಹೊತ್ತಿ ಉರಿದ ಕಾರು - undefined

ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿ ಕಾರು ಸಂಪೂರ್ಣವಾಗಿ ಸುಟ್ಟು ಹೋಗಿರುವ ಘಟನೆ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ನಡೆದಿದೆ.

ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ

By

Published : Mar 24, 2019, 11:09 PM IST

ರಾಮನಗರ: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಸಂಪೂರ್ಣವಾಗಿ ಕಾರು ಹೊತ್ತಿ ಉರಿದ ಘಟನೆ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ನಡೆದಿದೆ.

ಘಟನೆಯಲ್ಲಿ ಯಾರಿಗೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕಾರು ಮಾಲೀಕರು ಮಂಡ್ಯ ಮೂಲದವರು ಎನ್ನಲಾಗಿದ್ದು, ಸ್ಯಾಂಟ್ರೋ ಕಾರ್ ಕೆ.ಎ.05 -2781 ನಂಬರ್​​ನ ಕಾರು ಸಂಪೂರ್ಣ ಬೆಂಕಿಯ ಕೆನ್ನಾಲಿಗೆ ಸುಟ್ಟು ಭಸ್ಮವಾಗಿದೆ.

ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ

ಕಾರು ಮಂಡ್ಯದಿಂದ ಬೆಂಗಳೂರು ಕಡೆಗೆ ಹೋಗುತ್ತಿತ್ತು ಎನ್ನಲಾಗಿದ್ದು, ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ‌ ತಕ್ಷಣ ಕಾರಿನಲ್ಲಿದ್ದವರು ಕೆಳಗೆ ಇಳಿದ ತಕ್ಷಣವೇ ಕಾರು ಹೊತ್ತಿ ಉರಿಯಲಾರಂಭಿಸಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

For All Latest Updates

TAGGED:

ABOUT THE AUTHOR

...view details